ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ ಸಚಿವ ಕೆ.ಎನ್. ರಾಜಣ್ಣ..!

ಮೈಸೂರು: ನನಗೆ ಈಗಾಗಲೇ 75 ವರ್ಷವಾಗಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಆಲೋಚನೆಯಿಲ್ಲ ಎಂದು ರಾಜ್ಯ ಸಹಕಾರ ಸಚಿವ ಕೆ.ಎನ್.. ರಾಜಣ್ಣ ರಾಜಕೀಯ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ.ಮೈಸೂರಿನಲ್ಲಿ ಮಾತನಾಡಿದ ಅವರು, ನನಗೆ ಈಗಾಗಲೇ 75 ವರ್ಷವಾಗಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಆಲೋಚನೆಯಿಲ್ಲ.
ಯುವಕರಿಗೆ ಅವಕಾಶ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಈ ತೀರ್ಮಾನ ಕೈಗೊಂಡಿದ್ದೇನೆ. ಆದರೆ, ಸಹಕಾರಿ ಕ್ಷೇತ್ರ ಹಾಗೂ ಸಕ್ರೀಯ ರಾಜಕಾರಣದಲ್ಲಿ ಮುಂದುವರಿಯುತ್ತೇನೆ ಎಂದು ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಿದರು. 'ಚುನಾವಣೆಗೆ ನಿಲ್ಲದೆ ಸಹಕಾರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತೇನೆ. ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಮುಂದುವರೆಯುವೆ ಎಂದು ಹೇಳಿದರು.
ನಿಮ್ಮ ಪ್ರತಿಕ್ರಿಯೆ ಏನು?






