ಜಂಬೂಸವಾರಿಗೆ ಸಿಎಂ ಚಾಲನೆ: ಗಜಗಾಂಭೀರ್ಯದಿಂದ ಹೆಜ್ಜೆ ಹಾಕಿದ ಕ್ಯಾಪ್ಟನ್ ಅಭಿಮನ್ಯು
ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂ ಸವಾರಿಗೆ ಅದ್ದೂರಿ ಚಾಲನೆ ಸಿಕ್ಕಿದೆ. ಸಂಜೆ 4.42ರಿಂದ 5.06ರ ನಡುವಿನ ಕುಂಭ ಲಗ್ನದ ಶುಭ ಮುಹೂರ್ತದಲ್ಲಿ, ಚಾಮುಂಡೇಶ್ವರಿ ಮೂರ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪಾರ್ಚನೆ ಸಲ್ಲಿಸಿ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.
ದಸರಾ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಧನಂಜಯ ಹೆಜ್ಜೆ ಹಾಕಿದರೆ ಕುಮ್ಕಿ ಆನೆಗಳಾಗಿ ಕಾವೇರಿ ಮತ್ತು ರೂಪ, ನೌಫತ್ ಆನೆಯಾಗಿ ಗೋಪಿ, ಪಟ್ಟದ ಆನೆಯಾಗಿ ಶ್ರೀಕಂಠ ಮತ್ತು ಲಕ್ಷ್ಮಿ ಹೆಜ್ಜೆ ಹಾಕುತ್ತಿವೆ. ಸಾಲಾನೆಯಾಗಿ ಮಹೇಂದ್ರ, ಭೀಮ, ಕಂಜನ್, ಏಕಲವ್ಯ, ಪ್ರಶಾಂತ, ಸುಗ್ರೀವ, ಹೇಮಾವತಿ ಈ ಆನೆಗಳು ಅಭಿಮನ್ಯುವಿಗೆ ಸಾಥ್ ನೀಡುತ್ತಿವೆ.
ನಿಮ್ಮ ಪ್ರತಿಕ್ರಿಯೆ ಏನು?