ಜೈಲಿನಲ್ಲಿ ರಾಜಾತಿಥ್ಯ ಕೇಸ್: ವಿಲ್ಸನ್ ಗಾರ್ಡನ್ ನಾಗ, ವೇಲುಗೆ 3 ದಿನ ಪೊಲೀಸ್ ಕಸ್ಟಡಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವಾಗ ನಟ ದರ್ಶನ್ ಹಾಗೂ ಇನ್ನಿತರ ಆರೋಪಿಗಳಿಗೆ ರಾಜಾತಿಥ್ಯ ಕಲ್ಪಿಸಿದ ಆರೋಪ ಸಂಬಂಧ ವಿಚಾರಣಾಧೀನ ಕೈದಿಗಳಾಗಿರುವ ವಿಲ್ಸನ್ ಗಾರ್ಡನ್ ನಾಗ ಹಾಗೂ ವೇಲು ಎಂಬವರನ್ನು ಕೋರ್ಟ್ ಮೂರು ದಿನಗಳ ಕಾಲ ಪರಪ್ಪನ ಅಗ್ರಹಾರ ಠಾಣೆ ಪೊಲೀಸರ ವಶಕ್ಕೆ ಒಪ್ಪಿಸಿದೆ.
ನಾಗ ಮತ್ತು ವೇಲು ಇಬ್ಬರನ್ನೂ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದ ಪೊಲೀಸರು, ಜೈಲಿನ ಒಳಗೆ ವಿಚಾರಣೆಗೆ ಸಹಕಾರ ನೀಡುತ್ತಿಲ್ಲ. ಮೊಬೈಲ್ಗಳು ಪತ್ತೆಯಾಗಿದೆ. ಇನ್ನೂ ಕೆಲ ಮೊಬೈಲ್ ಪತ್ತೆಮಾಡಬೇಕಿದೆ. ಹೀಗಾಗಿ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು.
ಜೈಲಿನ ಒಳಗೆ ನಡೆದಿರುವ ವಿಚಾರ ಹಾಗಾಗಿ ಜೈಲಿನ ಒಳಗೆ ವಿಚಾರಣೆ ನಡೆಯಲಿ. ಇವರನ್ನು ಹೊರ ಕರೆತಂದು ವಿಚಾರಣೆ ನಡೆಸುವ ಅವಶ್ಯಕತೆ ಇಲ್ಲಾ ಎಂದು ನಾಗನ ಪರ ವಕೀಲರು ಮನವಿ ಮಾಡಿದ್ದಾರೆ. ಈಗಾಗಲೇ ಬೆಳಗಾವಿ ಜೈಲಿಗೆ ವರ್ಗಾವಣೆ ಆದೇಶ ಆಗಿದೆ ಎಂದು ಕೊರ್ಟ್ಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಸೆಷನ್ಸ್ ಕೋರ್ಟ್ ಆದೇಶ ಪ್ರತಿಯನ್ನು ನ್ಯಾಯಾಧೀಶರು ಕೇಳಿದ್ದಾರೆ. ಬಳಿಕ ಕೆಲಕಾಲ ವಿಚಾರಣೆಯನ್ನು 9ನೇ ACMM ಕೋರ್ಟ್ ಜಡ್ಜ್ ಮುಂದೂಡಿದರು.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






