ಟಾಲಿವುಡ್ ಸ್ಟಾರ್ ಮಹೇಶ್ ಬಾಬುಗೆ ಸಂಕಷ್ಟ: ಇಡಿಯಿಂದ ಬಂತು ನೋಟಿಸ್!

ಖ್ಯಾತ ಟಾಲಿವುಡ್ ಸ್ಟಾರ್ ಮಹೇಶ್ ಬಾಬುಗೆ ಇಡಿ ನೋಟಿಸ್ ಕೊಟ್ಟಿದೆ. ಸುರಾನ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ ಪ್ರಕರಣದಲ್ಲಿ ಇದೇ 28ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ.
ಮಹೇಶ್ ಬಾಬು ಅವರು ಸಂಸ್ಥೆಯ ಪ್ರಚಾರಕ್ಕಾಗಿ 5.9ಕೋಟಿ ರೂ.ಗಳನ್ನು ತೆಗೆದುಕೊಂಡಿದ್ದರು ಎನ್ನಲಾಗಿದೆ. ಏಪ್ರಿಲ್ 16ರಂದು ಇಡಿ ಅಧಿಕಾರಿಗಳು ಹೈದರಾಬಾದ್‌ನಲ್ಲಿ ಶೋಧ ನಡೆಸಿದ್ದರು. ಸುರಾನ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ ಕಚೇರಿಗಳು ಹಾಗೂ ಈ ಕಂಪನಿಗಳ ಮುಖ್ಯಸ್ಥರ ಮನೆಗಳ ಮೇಲೆ ದಾಳಿ ನಡೆಸಿತ್ತು. ಅದಾದ ನಂತರ ಈ ಬೆಳವಣಿಗೆ ನಡೆದಿದೆ. ಏಪ್ರಿಲ್ 28ರ ಬೆಳಿಗ್ಗೆ 10:30ಕ್ಕೆ ಮಹೇಶ್ ಬಾಬು ಹೈದರಾಬಾದ್‌ನಲ್ಲಿ ವಿಚಾರಣೆಗೆ ಹಾರಜಿ ಹಾಕಬೇಕಿದೆ. ಮಹೇಶ್ ಬಾಬು ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಸಾಯಿಸೂರ್ಯ ಡೆವಲಪರ್ಸ್ ಜಾಹೀರಾತಿನಲ್ಲಿ ನಟಿಸಿದ್ದರು. ಮಹೇಶ್ ಬಾಬು ಪ್ರಸ್ತುತ ರಾಜಮೌಳಿ ಅವರ ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈ ಚಿತ್ರದ ಚಿತ್ರೀಕರಣ ವೇಗವಾಗಿ ನಡೆಯುತ್ತಿದೆ. ಇದರ ಮಧ್ಯೆ ಅವರಿಗೆ ತೊಂದರೆ ಎದುರಾಗಿದೆ.
ಸುರಾನ್ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ನಲ್ಲಿ ಸಾಕಷ್ಟು ಅಕ್ರಮಗಳು ನಡೆದಿರೋದು ಬೆಳಕಿಗೆ ಬಂದಿದೆ. ರಿಯಲ್ ಎಸ್ಟೇಟ್ ಡೀಲಿಂಗ್ ವೇಳೆ ಈ ಅಕ್ರಮ ಎಸೆಗಲಾಗಿದೆ. ಇದರಲ್ಲಿ ಮಹೇಶ್ ಬಾಬು ಅವರ ಶಾಮೀಲಾಗಿದ್ದಾರಾ ಎಂಬ ಬಗ್ಗೆ ತನಿಖೆ ನಡೆಯಲಿದೆ.
ನಿಮ್ಮ ಪ್ರತಿಕ್ರಿಯೆ ಏನು?






