ಟೀಮ್ ಇಂಡಿಯಾ ವಿರುದ್ಧ ಐಸಿಸಿಗೆ ಪಾಕ್ ದೂರು; ಮೌನ ಮುರಿದ ಬಿಸಿಸಿಐ
ಏಷ್ಯಾಕಪ್‌ನಲ್ಲಿ ಭಾರತೀಯ ಆಟಗಾರರು ಪಾಕಿಸ್ತಾನಿ ಆಟಗಾರರೊಂದಿಗೆ ಕೈಕುಲುಕದಿರುವುದು ವಿವಾದಕ್ಕೆ ಕಾರಣವಾಗಿದೆ. ಪಿಸಿಬಿ ಐಸಿಸಿಗೆ ದೂರು ನೀಡಿದ್ದು, ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಈ ವಿವಾದಕ್ಕೆ ಪ್ರತಿಕ್ರಿಯಿಸಿದ್ದಾರೆ
ಭಾರತದ ಗೆಲುವನ್ನು ಆಚರಿಸುವತ್ತ ಎಲ್ಲರೂ ಗಮನಹರಿಸಬೇಕೆ ಹೊರತು ವಿವಾದದತ್ತ ಅಲ್ಲ. ಟೀಂ ಇಂಡಿಯಾ ಅದ್ಭುತ ಗೆಲುವು ಸಾಧಿಸಿದೆ ಎಂದು ನಾನು ಹೇಳಬಲ್ಲೆ. ಭಾರತ ಪಾಕಿಸ್ತಾನದ ವಿರುದ್ಧ ಏಕಪಕ್ಷೀಯ ಗೆಲುವು ಸಾಧಿಸಿದೆ. ನಾವು ಅದನ್ನು ಆನಂದಿಸಬೇಕು. ಅದನ್ನು ಬಿಟ್ಟು ಯಾವುದೇ ದೇಶ ಸೃಷ್ಟಿಸಿದ ಗದ್ದಲಕ್ಕೆ ನಾವು ಗಮನ ಕೊಡಬಾರದು. ಅದರಿಂದ ನಾವು ತಲೆಕೆಡಿಸಿಕೊಳ್ಳಬಾರದು. ನಮ್ಮ ಆಟಗಾರರ ಉತ್ತಮ ಪ್ರದರ್ಶನಕ್ಕಾಗಿ ನಾವು ಅವರನ್ನು ಪ್ರಶಂಸಿಸಬೇಕು ಮತ್ತು ಹೆಮ್ಮೆಪಡಬೇಕು. ಈ ಗೆಲುವಿನ ಓಟವು ಈ ಪಂದ್ಯಾವಳಿಯ ಅಂತಿಮ ಪಂದ್ಯದವರೆಗೂ ಮುಂದುವರಿಯುತ್ತದೆ ಎಂದು ನಾವು ಭಾವಿಸುತ್ತೇವೆ ಎಂದಿದ್ದಾರೆ.
ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಮಾತ್ರವಲ್ಲದೆ, ಬಿಸಿಸಿಐನ ಅಧಿಕಾರಿಯೊಬ್ಬರು ಈ ಬಗ್ಗೆ ಪಿಟಿಐಗೆ ತಿಳಿಸಿದ್ದು, ‘ಪಂದ್ಯದ ನಂತರ ಉಭಯ ತಂಡಗಳ ಆಟಗಾರರು ಕೈಕುಲುಕಲೇಬೇಕೆಂಬ ಯಾವುದೇ ಕಡ್ಡಾಯ ನಿಯಮವಿಲ್ಲ. ನೀವು ನಿಯಮ ಪುಸ್ತಕವನ್ನು ಓದಿದರೆ, ಎದುರಾಳಿ ತಂಡದೊಂದಿಗೆ ಕೈಕುಲುಕಲು ಅದರಲ್ಲಿ ಯಾವುದೇ ನಿಯಮ ಬರೆಯಲಾಗಿಲ್ಲ. ಇದು ಸಂವಹನದ ಒಂದು ಸಾಧನ ಮಾತ್ರ. ಹೀಗಾಗಿ ಈ ವಿಷಯದಲ್ಲಿ ಭಾರತ ತಂಡ ಯಾವುದೇ ತಪ್ಪು ಮಾಡಿಲ್ಲ ಎಂದಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?