ಟೀಮ್ ಇಂಡಿಯಾಗೆ ಗುಡ್ ನ್ಯೂಸ್: ಕಂಬ್ಯಾಕ್ಗೆ ಜಸ್ಪ್ರೀತ್ ಬುಮ್ರಾ ರೆಡಿ!

ಟೀಮ್ ಇಂಡಿಯಾಗೆ ಗುಡ್ ನ್ಯೂಸ್ ಸಿಕ್ಕಿದ್ದು, ಕಂಬ್ಯಾಕ್ಗೆ ಜಸ್ಪ್ರೀತ್ ಬುಮ್ರಾ ರೆಡಿ ಆಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದ ವೇಳೆ ಬೆನ್ನು ನೋವಿನ ಸಮಸ್ಯೆಗೆ ಸಿಲುಕಿದ ಬುಮ್ರಾ ಆ ಬಳಿಕ ಭಾರತದ ಪರ ಯಾವುದೇ ಪಂದ್ಯವಾಡಿಲ್ಲ. ಇದಾಗ್ಯೂ ಅವರು ಚಾಂಪಿಯನ್ಸ್ ಟ್ರೋಫಿಯಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಿತ್ತು.
ಆದರೆ ವೈದ್ಯಕೀಯ ವರದಿಯಲ್ಲಿ ಅವರು ಗಾಯದಿಂದ ಗುಣಮುಖರಾಗಲು ಹೆಚ್ಚಿನ ವಿಶ್ರಾಂತಿಯ ಅಗತ್ಯತೆಯನ್ನು ಸೂಚಿಸಲಾಗಿತ್ತು. ಹೀಗಾಗಿ ಬುಮ್ರಾ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದರು. ಇದೀಗ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ವೈದ್ಯಕೀಯ ಮೇಲ್ವಿಚಾರಣೆಯೊಂದಿಗೆ ಜಸ್ಪ್ರೀತ್ ಬುಮ್ರಾ ಫಿಟ್ನೆಸ್ ಕಸರತ್ತು ಆರಂಭಿಸಿದ್ದಾರೆ.
ಈ ಕಸರತ್ತಿನೊಂದಿಗೆ ಜಸ್ಪ್ರೀತ್ ಬುಮ್ರಾ ಕಂಬ್ಯಾಕ್ಗೆ ರೆಡಿಯಾಗುತ್ತಿದ್ದಾರೆ. ಅದರಂತೆ ಮುಂಬರುವ ಐಪಿಎಲ್ನಲ್ಲಿ ಯಾರ್ಕರ್ ಸ್ಪೆಷಲಿಸ್ಟ್ ಮತ್ತೆ ಮೈದಾನಕ್ಕಿಳಿಯುವುದು ಖಚಿತ. ಅಂದರೆ ಮಾರ್ಚ್ 23 ರಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ಮೂಲಕ ಬುಮ್ರಾ ವಾಪಸಾತಿ ಮಾಡಲಿದ್ದಾರೆ.
ಇನ್ನು ಚಾಂಪಿಯನ್ಸ್ ಟ್ರೋಫಿಗೆ ಜಸ್ಪ್ರೀತ್ ಬುಮ್ರಾ ಅಲಭ್ಯರಾಗಿರುವ ಕಾರಣ ಅವರ ಸ್ಥಾನದಲ್ಲಿ ಯುವ ವೇಗಿ ಹರ್ಷಿತ್ ರಾಣಾ ಕಾಣಿಸಿಕೊಂಡಿದ್ದಾರೆ
ನಿಮ್ಮ ಪ್ರತಿಕ್ರಿಯೆ ಏನು?






