ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಶುಭ್ಮನ್ ಗಿಲ್’ಗೆ ನಾಯಕನ ಪಟ್ಟ - ಕನ್ನಡಿಗನಿಗೆ ಒಲಿದ ಅದೃಷ್ಟ!

ಭಾರತ ಮತ್ತು ಇಂಗ್ಲೆಂಡ್ ನಡುವೆ ಐದು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯು 2025-27ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಚಕ್ರದ ಭಾಗವಾಗಿರುತ್ತದೆ. ಈ ಪ್ರವಾಸಕ್ಕಾಗಿ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ರವಿಚಂದ್ರನ್ ಅಶ್ವಿನ್ ಅವರಂತಹ ಅನುಭವಿ ಆಟಗಾರರು ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತರಾದ ನಂತರ ಇದು ಭಾರತೀಯ ತಂಡಕ್ಕೆ ಹೊಸ ಆರಂಭವಾಗಿದೆ.
ನಾಯಕನಾಗಿ ಶುಭಮನ್ ಗಿಲ್ ತಂಡ ಮುನ್ನಡೆಸಲಿದ್ದಾರೆ. ಉಪನಾಯಕನಾಗಿ ರಿಷಬ್ ಪಂತ್ ಆಯ್ಕೆ ಆಗಿದ್ದಾರೆ. ರೋಹಿತ್ ಶರ್ಮಾ ನಿವೃತ್ತಿ ಬಳಿಕ ಭಾರತ ತಂಡದ ನಾಯಕತ್ವ ಜಸ್ಪ್ರೀತ್ ಬುಮ್ರಾಗೆ ಸಿಗಲಿದೆ ಎನ್ನಲಾಗಿತ್ತು. ಆದರೆ ಭವಿಷ್ಯದ ದೃಷ್ಟಿಯಿಂದ ಆಯ್ಕೆ ಸಮಿತಿ ಗಿಲ್ಗೆ ಕ್ಯಾಪ್ಟನ್ ಪಟ್ಟ ನೀಡಿದೆ. ಶುಭಮನ್ ಗಿಲ್ ಟೆಸ್ಟ್ ಕ್ರಿಕೆಟ್ನಲ್ಲಿ 32 ಪಂದ್ಯಗಳನ್ನು ಆಡಿದ್ದು, ಐದು ಶತಕ ಸೇರಿ ಈವರೆಗೆ 1,893 ರನ್ ಗಳಿಸಿದ್ದಾರೆ.
ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್, ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್ ಅಗರ್ಕರ್ ಸತತ ಸಭೆಯನ್ನು ನಡೆಸಿದ ನಂತರ, ಭಾರತ ತಂಡವನ್ನು ಪ್ರಕಟಿಸಲಾಗಿದೆ. ಬಿಸಿಸಿಐ ಆಯ್ಕೆ ಸಮಿತಿಯು ಹೊಸ ಟೆಸ್ಟ್ ನಾಯಕನನ್ನು ಆಯ್ಕೆ ಮಾಡುವ ಮೂಲಕ ತಂಡದ ದೀರ್ಘ ಪರಿವರ್ತನೆಯ ಪ್ರಯಾಣಕ್ಕೆ ಚಾಲನೆ ನೀಡಿದೆ.
ಇಂಗ್ಲೆಂಡ್ ಟೆಸ್ಟ್ಗೆ ಭಾರತ ತಂಡ
ಶುಭಮನ್ ಗಿಲ್ (ನಾಯಕ), ರಿಷಬ್ ಪಂತ್ (ಉಪ ನಾಯಕ/ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ಕೆ.ಎಲ್.ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯ ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೇಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಆರ್ಶ್ದೀಪ್ ಸಿಂಗ್, ಕುಲ್ದೀಪ್ ಯಾದವ್
ನಿಮ್ಮ ಪ್ರತಿಕ್ರಿಯೆ ಏನು?






