ಡಿ ಗ್ಯಾಂಗ್ಗೆ ಬಿಗ್ ಶಾಕ್: ದರ್ಶನ್, ಪವಿತ್ರಾ ಗೌಡ ಸೇರಿ 7 ಜನರ ಜಾಮೀನು ರದ್ದು
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ಜಾಮೀನು ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ. ನಟ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿ ಒಟ್ಟು ಏಳು ಮಂದಿಯ ಜಾಮೀನುಗಳನ್ನು ರದ್ದುಗೊಳಿಸಲಾಗಿದೆ.
ಈ ಮೊದಲು, ಹೈಕೋರ್ಟ್ ನೀಡಿದ ಜಾಮೀನು ಆದೇಶವನ್ನು ಪ್ರಶ್ನಿಸಿ, ಪೊಲೀಸರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಪರ-ವಿರೋಧ ವಾದಗಳ ನಂತರ ತೀರ್ಪು ಕಾಯ್ದಿರಿಸಲಾಗಿತ್ತು.
ನಟ ದರ್ಶನ್ ಅವರು ಈ ಪ್ರಕರಣದಲ್ಲಿ ಜೈಲು ವಾಸ ಅನುಭವಿಸಿ, ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿ, ಸಿನಿಮಾ ಕೆಲಸಗಳಲ್ಲಿ ತೊಡಗಿದ್ದರು. ಈಗ ಜಾಮೀನು ರದ್ದಾದ ಹಿನ್ನೆಲೆಯಲ್ಲಿ, ದರ್ಶನ್ ಮತ್ತೆ ಜೈಲಿಗೆ ತೆರಳಬೇಕಾಗಿದೆ. ಸದ್ಯ ಇವತ್ತು ಸುಪ್ರೀಂ ಕೋರ್ಟ್ನಲ್ಲಿ ರೇಣುಕಾಸ್ವಾಮಿ ಪ್ರಕರಣದ ಆರೋಪಿ ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರದ ಅರ್ಜಿಯ ಆದೇಶ ಹೊರ ಬಿದ್ದಿದೆ.
ನಿಮ್ಮ ಪ್ರತಿಕ್ರಿಯೆ ಏನು?