ಡಿಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿ: ಇಬ್ಬರು ಸಿಬ್ಬಂದಿಗೆ ಗಾಯ

ಮಂಡ್ಯ: ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಬೆಂಗಾವಲು ವಾಹನ ಪಲ್ಟಿಯಾದ ಘಟನೆ ಸಂಭವಿಸಿದೆ. ಘಟನೆಯು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಟಿಎಂ ಹೊಸೂರು ಬಳಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ನಡೆದಿದೆ.
ಬೆಂಗಾವಲು ವಾಹನ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ, ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ತಕ್ಷಣ ಮೈಸೂರಿನ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.
ಡಿಕೆ ಶಿವಕುಮಾರ್ ಅವರು ಬೆಂಗಾವಲು ವಾಹನಕ್ಕೂ ಹಿಂದೆ ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕಾರಣ ಅವರಿಗೆ ಯಾವುದೇ ಅಪಾಯವಾಗಿಲ್ಲ. ಘಟನೆ ಬಳಿಕ ಅವರು ಸುರಕ್ಷಿತವಾಗಿ ಬೆಂಗಳೂರಿಗೆ ಪ್ರಯಾಣ ಮಾಡಿದ್ದಾರೆ. ಪ್ರಸ್ತುತ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಸಂಚಾರ ಪೊಲೀಸರು ಮತ್ತು ಜಿಲ್ಲಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






