ಡಿಕೆಶಿ ವಿದೇಶದಲ್ಲಿ.. ಕುತೂಹಲ ಕೆರಳಿಸಿದ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್: KPCC ಅಧ್ಯಕ್ಷ ಸ್ಥಾನದ ಬದಲಾವಣೆ ಚರ್ಚೆನಾ?

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ನಿನ್ನೆ ರಾತ್ರಿ ಡಿನ್ನರ್ ಮೀಟಿಂಗ್ ನಡೆದಿದೆ. ಬೆಂಗಳೂರಿನಲ್ಲಿರುವ ಸರ್ಕಾರಿ ನಿವಾಸದಲ್ಲಿ ನಡೆದ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಚಿವರಾದ ಕೆ.ಎನ್.ರಾಜಣ್ಣ,
ಹೆಚ್.ಸಿ.ಮಹದೇವಪ್ಪ ಸೇರಿದಂತೆ ಕೆಲ ಸಚಿವರು ಭಾಗಿಯಾಗಿದ್ರು. ಡಿನ್ನರ್ ಮೀಟಿಂಗ್ ಬಳಿಕ ಮಾತನಾಡಿದ ಸಚಿವ ರಾಜಣ್ಣ ಹಾಗೂ ಹೆಚ್. ಸಿ ಮಹದೇವಪ್ಪ ಯಾವುದೇ ಚರ್ಚೆ ಆಗಿಲ್ಲ. ಎಲ್ಲರೂ ಊಟಕ್ಕೆ ಸೇರಿದ್ವಿ. ಬೇರೆ ಯಾವುದೇ ಚರ್ಚೆಯಾಗಿಲ್ಲ ಎಂದಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ಸ್ಥಾನದ ಬದಲಾವಣೆ ಹಾಗೂ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಚರ್ಚೆ ನಡುವೆಯೇ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಲ್ಲಿರುವಾಗಲೇ ಸಭೆ ನಡೆದಿರುವುದು ಕುತೂಹಲ ಮೂಡಿಸಿದೆ. ಸಭೆಯಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಭಾಗಿಯಾಗಿರುವುದು ಮತ್ತಷ್ಟು ಮಹತ್ವ ಪಡೆದುಕೊಂಡಿದೆ.
ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಡಾ.ಜಿ.ಪರಮೇಶ್ವರ್, ಕೆ.ಎನ್. ರಾಜಣ್ಣ, ಡಾ.ಎಚ್.ಸಿ. ಮಹದೇವಪ್ಪ ಸೇರಿ ಏಳು ಮಂದಿ ಸಚಿವರು ಹಾಜರಿದ್ದರು. ಜತೆಗೆ ಒಟ್ಟು 35 ಮಂದಿ ಶಾಸಕರೂ ಭಾಗವಹಿಸಿದ್ದರು. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಭೋಜನಕೂಟಕ್ಕೆ ಆಹ್ವಾನಿಸಿದ್ದಾಗಿ ಸತೀಶ್ ಜಾರಕಿಹೊಳಿ ಕಚೇರಿ ಮೂಲಗಳು ಸ್ಪಷ್ಟಪಡಿವೆ. ಆದರೂ ಡಿ.ಕೆ. ಶಿವಕುಮಾರ್ ವಿದೇಶ ಪ್ರವಾಸದಲ್ಲಿದ್ದಾಗ ನಡೆಯುತ್ತಿ ರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಔತಣಕೂಟ ಮಹತ್ವ ಪಡೆದುಕೊಂಡಿದೆ.
ನಿಮ್ಮ ಪ್ರತಿಕ್ರಿಯೆ ಏನು?






