ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು: ದಿಢೀರ್ ಬೆಂಕಿ ಹೊತ್ತಿಕೊಂಡು ಐವರು ಸಜೀವದಹನ!

ಜೂನ್ 18, 2025 - 21:12
 0  15
ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು: ದಿಢೀರ್ ಬೆಂಕಿ ಹೊತ್ತಿಕೊಂಡು ಐವರು ಸಜೀವದಹನ!

ಲಕ್ನೋ:- ಉತ್ತರ ಪ್ರದೇಶದ ಬುಲಂದ್‌ಶಹರ್‌ ಜಿಲ್ಲೆಯಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮದುವೆ ಮುಗಿಸಿ ಬರುತ್ತಿದ್ದ ಐವರು ಸಜೀವ ದಹನವಾಗಿರುವ ಘಟನೆ ಮುಂಜಾನೆ 5:50ರ ಸುಮಾರಿಗೆ  ಜರುಗಿದೆ. 

ಚಾಲಕ ನಿದ್ದೆ ಮಂಪರಿನಲ್ಲಿದ್ದ ಹಿನ್ನೆಲೆ ಸ್ವಿಫ್ಟ್ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದೆ. ಕಾರು ಲಾಕ್ ಆದ ಕಾರಣ ಹೊರಗೆ ಬರಲಾರದೇ ಐವರು ಸಜೀವ ದಹನವಾಗಿದ್ದಾರೆ. ಬದೌನ್‌ನಲ್ಲಿ ನಡೆದ ಮದುವೆ ಮುಗಿಸಿ ದೆಹಲಿಗೆ ವಾಪಸ್ ಆಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮಹಿಳೆ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow