ಡಿಸಿಎಂ ಡಿಕೆ ಶಿವಕುಮಾರ್ ಬಿಜೆಪಿ ಸೇರಲು ಯತ್ನಿಸುತ್ತಿದ್ದಾರೆ: ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ 

ಆಗಸ್ಟ್ 31, 2025 - 18:14
 0  22
ಡಿಸಿಎಂ ಡಿಕೆ ಶಿವಕುಮಾರ್ ಬಿಜೆಪಿ ಸೇರಲು ಯತ್ನಿಸುತ್ತಿದ್ದಾರೆ: ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ 

ಕಲಬುರಗಿ: ಡಿಸಿಎಂ ಡಿಕೆ ಶಿವಕುಮಾರ್ ಬಿಜೆಪಿ ಸೇರಲು ಯತ್ನಿಸುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಜೊತೆ ಸೇರಿ ಸರ್ಕಾರ ಮಾಡಲು ದೆಹಲಿಯಲ್ಲಿ ವಿಜಯೇಂದ್ರ  ಜೊತೆ ಸೇರಿ ಒಂದು ಚರ್ಚೆ ಮಾಡಿದ್ರು.

60 ರಿಂದ 70 ಕಾಂಗ್ರೆಸ್ ಶಾಸಕರನ್ನ ಕರೆತಂದು ನಮಸ್ತೆ ಸದಾ ವತ್ಸಲೇ ಹಾಡ್ತೀವಿ ಅಂತಾ ಹೇಳಿದ್ದಾರೆ. ಈ ಮೂಲಕ ಡಿಕೆಶಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರು. ಆದರೆ ನಮ್ಮ ಆಂತರಿಕ ವರದಿಯಲ್ಲಿ ಡಿಕೆಶಿ ಕಡೆ 12 ಶಾಸಕರು ಇಲ್ಲ ಅಂತಾ ವರದಿ ಬಂತು.

ಹೀಗಾಗಿ ನಾವು ಸರ್ಕಾರ ಮಾಡಲು ಪ್ರಯತ್ನಿಸಿಲ್ಲ ಅಂತಾ ಬಿಜೆಪಿ ಹೈಕಮಾಂಡ್ ಹೇಳಿತ್ತು. ವಿಜಯೇಂದ್ರ ಹಾಗೂ ಡಿಕೆಶಿ ಇವರಿಬ್ಬರು ಕುಳಿತುಬಿಟ್ಟಿದ್ದರೆ ಕರ್ನಾಟಕವನ್ನ ಮಾರಾಟ ಮಾಡುತ್ತಿದ್ದರು. ಹೀಗಾಗಿ ಡಿಕೆಶಿ ಬೇಡ ಅಂತಾ ನಮ್ಮವರು ಅಂದಿದ್ರು ಎಂದು ಹೇಳಿದ್ದಾರೆ. 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow