ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ದಂಪತಿ ಅರೆಸ್ಟ್! 1 ಕೋಟಿಗೂ ಅಧಿಕ ಮೌಲ್ಯದ ‘ಡ್ರಗ್ಸ್’ ವಶಕ್ಕೆ

ಸೆಪ್ಟೆಂಬರ್ 23, 2024 - 22:20
ಸೆಪ್ಟೆಂಬರ್ 23, 2024 - 17:30
 0  17
ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ದಂಪತಿ ಅರೆಸ್ಟ್! 1 ಕೋಟಿಗೂ ಅಧಿಕ ಮೌಲ್ಯದ ‘ಡ್ರಗ್ಸ್’ ವಶಕ್ಕೆ

ಬೆಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾರಣೆ ನಡೆಸಿ ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೈಕಲ್ ಓಕೆಲಿ, ಸಹನಾ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ ಒಂದು ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್​ ವಶಕ್ಕೆ ಪಡೆಯಲಾಗಿದೆ. ಆರೋಪಿ ಮೈಕೆಲ್​ 2018ರಲ್ಲಿ ಬ್ಯುಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದು,

 ಕೆ.ಆರ್​​.ಪುರಂನಲ್ಲಿ ಬಾಡಿಗೆ ಮನೆ ಮಾಡಿಕೊಂಡು ಇದ್ದನು.  ಸಹನಾ ಮತ್ತು ಮೈಕಲ್​ ಸ್ನೇಹಿತರಾಗಿದ್ದು, ಒಟ್ಟಿಗೆ ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದರು. ​​ನಂತರ, ಮೈಕಲ್ ಮತ್ತು ಸಹನಾ ಒಟ್ಟಿಗೆ ಕೆಆರ್​ಪುರಂನಿಂದ ಯರಪ್ಪನಹಳ್ಳಿ ಗ್ರಾಮಕ್ಕೆ ಶಿಫ್ಟ್​​ ಆಗಿದ್ದಾರೆ. ಇಲ್ಲಿ, ಒಂದೇ ಮನೆಯಲ್ಲಿ ವಾಸವಾಗಿದ್ದ ಮೈಕಲ್ ಮತ್ತು ಸಹನಾ, ಇಲ್ಲಿಂದಲೇ ಡ್ರಗ್ಸ್​ ಸರಬರಾಜು ಮಾಡಲು ಆರಂಭಿಸಿದರು.

ಸಿಸಿಬಿ ಪೊಲೀಸರು ಜುಲೈನಲ್ಲಿ ಓರ್ವ ಡ್ರಗ್ಸ್​ ಪೆಡ್ಲರ್​ನನ್ನು​ ಬಂಧಿಸಿದ್ದರು. ಈತ ನೀಡಿದ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಮೈಕಲ್​ನ ಬಂಧನಕ್ಕೆ ಬಲೆಬೀಸಿದರು. ಆರೋಪಿ ಮೈಕಲ್ ಯರಪ್ಪನಹಳ್ಳಿ ಗ್ರಾಮದಲ್ಲಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಆತನ ಮನೆ ಮೇಲೆ ದಾಳಿ ಮಾಡಿದರು. ಬಳಿಕ ಇಬ್ಬರನ್ನೂ ಬಂಧಿಸಿದ್ದಾರೆ. ಬಂಧಿತರಿಂದ ಒಂದು ಕೆಜಿಗೂ ಅಧಿಕ ಎಂಡಿಎಂಎ, ಮೂರು ಮೊಬೈಲ್​​​​​, ಎರಡು ಎಲೆಕ್ಟ್ರಾನಿಕ್​ ತೂಕದ ಯಂತ್ರವನ್ನು ಸಿಸಿಬಿ ಪೊಲೀಸರುಸ ವಶಕ್ಕೆ ಪಡೆದಿದ್ದಾರೆ.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow