ತಿಂಗಳ ಮೊದಲ ದಿನವೇ ಜನರಿಗೆ ಸಿಹಿಸುದ್ದಿ! ಇಂದಿನಿಂದ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ!

ಸೆಪ್ಟೆಂಬರ್ 1, 2025 - 10:32
 0  15
ತಿಂಗಳ ಮೊದಲ ದಿನವೇ ಜನರಿಗೆ ಸಿಹಿಸುದ್ದಿ! ಇಂದಿನಿಂದ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ!

ನವದೆಹಲಿ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಬೆಲೆಯನ್ನು ರೂ. 51.50 ಇಳಿಸುವುದಾಗಿ ಘೋಷಿಸಿವೆ. ಬದಲಾವಣೆ ಸೆಪ್ಟೆಂಬರ್ 1ರಿಂದ ಜಾರಿಗೆ ಬರಲಿದೆ.

ಆದರೆ 14.2 ಕೆಜಿ ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಕಂಪನಿಗಳು ಸ್ಪಷ್ಟಪಡಿಸಿವೆ. ಪರಿಷ್ಕರಣೆಯ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ LPG ಸಿಲಿಂಡರ್ ಈಗ 1,580 ರೂ.ಗಳಿಗೆ ಲಭ್ಯವಿರುತ್ತದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರಕ್ಕೆ ಅನುಗುಣವಾಗಿ ಎಲ್ಪಿಜಿ ದರ ಪ್ರತಿ ತಿಂಗಳು ಪರಿಷ್ಕರಣೆಯಾಗುತ್ತಿರುತ್ತದೆ. ಹಿಂದೆ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು 33.50 ರೂ.ಗಳಷ್ಟು ಕಡಿಮೆ ಮಾಡಿದ್ದವು. ಅದಕ್ಕೂ ಮೊದಲು ಜುಲೈ 1 ರಂದು 58.50 ರೂ.ಗಳಷ್ಟು ಬೆಲೆಯನ್ನು ಕಡಿಮೆ ಮಾಡಿದ್ದವು.

ಜೂನ್ನಲ್ಲಿ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್ಗಳಿಗೆ 24 ರೂ.ಗಳಷ್ಟು ಕಡಿತವನ್ನು ಘೋಷಿಸಿ, ದರವನ್ನು 1,723.50 ರೂ.ಗಳಿಗೆ ನಿಗದಿಪಡಿಸಿದ್ದವು. ಏಪ್ರಿಲ್ನಲ್ಲಿ ಬೆಲೆ 1,762 ರೂ.ಗಳಷ್ಟಿತ್ತು. ಫೆಬ್ರವರಿಯಲ್ಲಿ 7 ರೂಪಾಯಿಗಳಷ್ಟು ಸಣ್ಣ ಇಳಿಕೆಯಾಗಿತ್ತು. ಆದರೆ  ಮಾರ್ಚ್ನಲ್ಲಿ 6 ರೂ. ಹೆಚ್ಚಳ ಮಾಡಿತ್ತು.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow