ತಿರುಪತಿಯಲ್ಲಿ ಕಾಲ್ತುಳಿತಕ್ಕೆ 6 ಭಕ್ತರು ಬಲಿ! 20ಕ್ಕೂ ಹೆಚ್ಚು ಜನರಿಗೆ ಗಾಯ

ತಿರುಮಲ: ಭಾರೀ ಕಾಲ್ತುಳಿತ ಉಂಟಾಗಿ 6 ಮಂದಿ ಸಾವನ್ನಪ್ಪಿರುವ ಘಟನೆ ಭಾರತದ ಶ್ರೀಮಂತ ದೇವಾಲಯಗಳಲ್ಲಿ ಒಂದಾಗಿರುವ ಆಂಧ್ರಪ್ರದೇಶದ ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೂ ನಾಲ್ವರು ತೀವ್ರ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿಯ ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನಗಳ ಕಾಲ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಟೋಕನ್ ವಿತರಣೆಯ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದೆ.
ಭಾರೀ ಸಂಖ್ಯೆಯಲ್ಲಿ ಭಕ್ತರು ಟೋಕನ್ ಪಡೆಯಲು ಯತ್ನಿಸಿದ ಪರಿಣಾಮ ನೂಕುನುಗ್ಗಲು ಉಂಟಾಯಿತು. ಘಟನೆಯಲ್ಲಿ ಒಟ್ಟು 20 ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ರುಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






