ತೆರಿಗೆದಾರರಿಗೆ ಭರ್ಜರಿ ಗಿಫ್ಟ್: 12 ಲಕ್ಷದವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಕಟ್ಟುವಂತಿಲ್ಲ

ಫೆಬ್ರವರಿ 1, 2025 - 12:48
 0  26
ತೆರಿಗೆದಾರರಿಗೆ ಭರ್ಜರಿ ಗಿಫ್ಟ್: 12 ಲಕ್ಷದವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಕಟ್ಟುವಂತಿಲ್ಲ

ಬೆಂಗಳೂರು: ಕೇಂದ್ರ ಬಜೆಟ್ ಮಂಡನೆ ಆರಂಭವಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ಮೂಲಕ ಅವರು ಇತಿಹಾಸ ಸೃಷ್ಟಿಸಿದ್ದಾರೆ. ಇನ್ನೂ ಈ ವೇಳೆ ಈ ಬಾರಿಯ ಕೇಂದ್ರ ಬಜೆಟ್ ಮಧ್ಯ ವರ್ಗಕ್ಕೆ ಭರ್ಜರಿ ಕೊಡುಗೆ ನೀಡಿದೆ.

 7 ಲಕ್ಷ ರೂಪಾಯಿ ವರೆಗೆ ಇದ್ದ ತೆರಿಗೆ ವಿನಾಯಿತಿಯನ್ನು ಇದೀಗ ಬರೋಬ್ಬರಿ 12 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ. ಹೀಗಾಗಿ ಇದೀಗ ಮಧ್ಯ ವರ್ಗ ನಿರಾಳವಾಗಿದೆ. ಕಾರಣ 12 ಲಕ್ಷ ರೂಪಾಯಿ ವರೆಗೆ ಯಾವುದೇ ಆದಾಯ ತೆರಿಗೆ ಇಲ್ಲ. ಪ್ರಮುಖ ಬದಲಾವಣೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. 

$4 ರಿಂದ $8 ಲಕ್ಷದವರೆಗಿನ ಆದಾಯಕ್ಕೆ ಶೇ.5ರಷ್ಟು ತೆರಿಗೆ

 

$8 ರಿಂದ $12 ಲಕ್ಷದವರೆಗಿನ ಆದಾಯಕ್ಕೆ ಶೇ.10ರಷ್ಟು ತೆರಿಗೆ

 

$12 ರಿಂದ $16 ಲಕ್ಷದವರೆಗಿನ ಆದಾಯಕ್ಕೆ ಶೇ.15ರಷ್ಟು ತೆರಿಗೆ

 

$16 ರಿಂದ 20 ಲಕ್ಷದವರೆಗಿನ ಆದಾಯಕ್ಕೆ ಶೇ.20ರಷ್ಟು ತೆರಿಗೆ

 

$20 -24 ಲಕ್ಷದವರೆಗಿನ ಆದಾಯಕ್ಕೆ ಶೇ.25ರಷ್ಟು ತೆರಿಗೆ

 

25 ಲಕ್ಷ ರೂಪಾಯಿ ಮೇಲ್ಪಟ್ಟ ಆದಾಯಕ್ಕೆ ಶೇ.30ರಷ್ಟು ತೆರಿಗೆ

 

ಐಟಿ ರಿಟರ್ನ್ ಸಲ್ಲಿಕೆ ಮಿತಿ 2 ವರ್ಷದಿಂದ 4 ವರ್ಷಕ್ಕೆ ಏರಿಕೆ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow