ದರ್ಶನ್ ಜಾಮೀನು ರದ್ದು: ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ ಮುಂದೂಡಿಕೆ..!
‘ದಿ ಡೆವಿಲ್’ ಚಿತ್ರದ ಹೊಸ ಹಾಡು ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಬಿಡುಗಡೆಯನ್ನು ಚಿತ್ರತಂಡ ಮುಂದೂಡಿದೆ. ಮೂಲತಃ ಆಗಸ್ಟ್ 15ರಂದು ಬಿಡುಗಡೆ ಆಗಬೇಕಿದ್ದ ಈ ಹಾಡು, ನಟ ದರ್ಶನ್ ಅವರಿಗೆ ಹೈಕೋರ್ಟ್ ನೀಡಿದ್ದ ಜಾಮೀನು ಸುಪ್ರೀಂಕೋರ್ಟ್ ರದ್ದು ಮಾಡಿದ ಹಿನ್ನೆಲೆ ಮುಂದೂಡಲಾಗಿದೆ.
ಈ ಹಾಡಿನ ಟೈಟಲ್ನಿಂದಲೇ ಅಭಿಮಾನಿಗಳಲ್ಲಿ ವಿಶೇಷ ಕುತೂಹಲವಿತ್ತು. ಆದರೆ ಬಿಡುಗಡೆಯಿಗೆ ಕೇವಲ ಒಂದು ದಿನ ಬಾಕಿ ಇರುವಾಗಲೇ ದರ್ಶನ್ ಜಾಮೀನು ರದ್ದು ಸುದ್ದಿಯು ಅಭಿಮಾನಿಗಳಿಗೆ ಡಬಲ್ ನಿರಾಸೆ ತಂದಿದೆ.
‘ಮಿಲನ’ ಖ್ಯಾತಿಯ ಪ್ರಕಾಶ್ ವೀರ್ ನಿರ್ದೇಶನದ ಈ ಸಿನಿಮಾ ‘ಶ್ರೀ ಜೈಮಾತಾ ಕಂಬೈನ್ಸ್’ ಸಂಸ್ಥೆಯಿಂದ ನಿರ್ಮಾಣವಾಗುತ್ತಿದೆ. ಹೊಸ ಬಿಡುಗಡೆಯ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಚಿತ್ರತಂಡ ತಿಳಿಸಿದೆ.
ನಿಮ್ಮ ಪ್ರತಿಕ್ರಿಯೆ ಏನು?