ದರ್ಶನ್ ಪಾಲಿಗೆ ಕನಸಾಯ್ತು ಬೇಲ್! ದಾಸನಿಗೆ ಶಾಕ್ ಮೇಲೆ ಶಾಕ್, ಜಾಮೀನು ಅರ್ಜಿ ಮುಂದೂಡಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ನಾಳೆಗೆ ಮುಂದೂಡಿತು. ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯೂ ನಾಳೆ ನಡೆಯಲಿದೆ. ದರ್ಶನ್ ಜಾಮೀನು ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್, ಇಂದು ಎಸ್ ಪಿಪಿ ಪ್ರಸನ್ನ ಕುಮಾರ್ ಅವರ ಸುದೀರ್ಘ ಪ್ರತಿವಾದ ಮಂಡನೆ ಆಲಿಸಿತು.
ಬಳಿಕ ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿತು. ನಾಳೆ ಮಧ್ಯಾಹ್ನ 12:30ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ. ಬಳ್ಳಾರಿ ಜೈಲಿನಲ್ಲಿ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಇಂದು ಜಾಮೀನು ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ನಿರೀಕ್ಷೆ ಹುಸಿಯಾಗಿದ್ದು, ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆಯಾಗಿದೆ.
ರೇಣುಕಾ ಸ್ವಾಮಿ ಕೊಲೆ ಜೂನ್ನಲ್ಲಿ ನಡೆದಿತ್ತು. ಈ ಘಟನೆ ನಡೆದು ಇಂದಿಗೆ ಸರಿಯಾಗಿ ನಾಲ್ಕು ತಿಂಗಳು ಪೂರ್ಣಗೊಂಡಿದೆ. ಈವರೆಗೆ ದರ್ಶನ್ಗೆ ಜಾಮೀನು ಪಡೆಯೋಕೆ ಸಾಧ್ಯವಾಗುತ್ತಿಲ್ಲ. ಅವರು ಪ್ರಕರಣದಿಂದ ಹೊರ ಬರಲು ನಿರಂತರವಾಗಿ ಪ್ರಯತ್ನ ಮಾಡುತ್ತಲೇ ಇದ್ದಾರೆ.
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






