ದರ್ಶನ್ʼಗೆ ಮತ್ತೆ ಜೈಲಾ? ಬೇಲಾ? ಇಂದು ನಿರ್ಧಾರವಾಗಲಿದೆ ನಟನ ಜಾಮೀನು ಭವಿಷ್ಯ!

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ನಲ್ಲಿ ನಡೆಯಲಿದೆ. ದರ್ಶನ್ ಜಾಮೀನು ಅರ್ಜಿಗೆ ಆಕ್ಷೇಪಿಸಿ ಎಸ್ ಪಿಪಿ ಪ್ರಸನ್ನ ಕುಮಾರ್ ವಾದಿಸಲಿದ್ದಾರೆ. ಹೈಕೋರ್ಟ್ ನ್ಯಾ. ವಿಶ್ವಜಿತ್ ಶೆಟ್ಟಿ ಅವರ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪ್ರಕರಣದ ಆರು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
A1 ಆರೋಪಿ ಪವಿತ್ರಾಗೌಡ, A2 ನಟ ದರ್ಶನ್, ನಾಗರಾಜ್, ಲಕ್ಷ್ಮಣ್, ಅನುಕುಮಾರ್ ಮತ್ತು ಜಗದೀಶ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿಯಾಗಿರುವ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಮಧ್ಯಂತರ ಜಾಮೀನು ಅವಧಿ ಮುಗಿಯುತ್ತಾ ಬಂದ್ರೂ ಇನ್ನೂ ದರ್ಶನ್ಗೆ ಯಾಕೆ ಸರ್ಜರಿ ಮಾಡಿಲ್ಲ ಎನ್ನುವ ಪ್ರಶ್ನೆ ಕೂಡ ಮೂಡಿದೆ.
ನಿಮ್ಮ ಪ್ರತಿಕ್ರಿಯೆ ಏನು?






