ದಾವಣಗೆರೆ ಮಹಿಳೆಗೆ ಥಳಿತ ಪ್ರಕರಣ: ಕಾನೂನು ಉಲ್ಲಂಘಿಸಿದರೆ ಬಲಿ ಹಾಕುತ್ತೇವೆ – ಸಿಎಂ ಸಿದ್ದರಾಮಯ್ಯ

ಎಪ್ರಿಲ್ 16, 2025 - 14:00
 0  13
ದಾವಣಗೆರೆ ಮಹಿಳೆಗೆ ಥಳಿತ ಪ್ರಕರಣ: ಕಾನೂನು ಉಲ್ಲಂಘಿಸಿದರೆ ಬಲಿ ಹಾಕುತ್ತೇವೆ – ಸಿಎಂ ಸಿದ್ದರಾಮಯ್ಯ

ಕಲಬುರಗಿ: ದಾವಣಗೆರೆಯಲ್ಲಿ ಅನೈತಿಕ ಸಂಬಂಧ ಆರೋಪಿಸಿ  ನಡುರಸ್ತೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆದಿರುವ  ಬಗ್ಗೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ಯಾರೇ ತಪ್ಪು ಮಾಡಿದರೂ ಕೂಡ, ಕಾನೂನು ಉಲ್ಲಂಘಿಸಿದರೆ ಯಾರು ಎಷ್ಟೇ ಪ್ರಬಲವಾಗಿದ್ದರೂ, ಬಲಿ ಹಾಕುತ್ತೇವೆ ಎಂದು ಮುಖ್ಯಮಂತ್ರಿಗಳು ಎಚ್ಚರಿಸಿದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಬಿಜೆಪಿಯದ್ದು ದ್ವೇಷದ ರಾಜಕಾರಣ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಚಾರ್ಜ್ ಶೀಟ್ ಹಾಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಬಿಜೆಪಿಯವರು ರಾಜಕೀಯ ಉದ್ದೇಶದಿಂದ ಇದನ್ನು ಮಾಡುತ್ತಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ನಿನ್ನೆ ಮೊನ್ನೆ ಪ್ರಾರಂಭವಾಗಿಲ್ಲ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಆಸ್ತಿ ಮುಟ್ಟುಗೋಲು ಹಾಕುವುದು, ಚಾರ್ಚ್ ಶೀಟ್ ಹಾಕುವುದು ರಾಜಕೀಯ ದ್ವೇಷದಿಂದ ಮಾಡುತ್ತಿದ್ದಾರೆ ಎಂದರು.

ಜಾತಿ ಸಾಮಾಜಿಕ ಸಮೀಕ್ಷೆ: ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ

ಚನ್ನಗಿರಿ ಶಾಸಕರು ಜಾತಿ ಗಣತಿ ಬಗ್ಗೆ ಲಿಂಗಾಯತ ಶಾಸಕರು ರಾಜಿನಾಮೆ ನೀಡುವಂತೆ ಹೇಳಿಕೆ  ನೀಡಿರುವ ಬಗ್ಗೆ  ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ  ನಾಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, 

ಈ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು.  ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾಳೆ ಅಂತಿಮವಾಗಿ ತೀರ್ಮಾನ ಮಾಡಲಾಗುವುದು ಎಂದರು.  ಸಾಮಾಜಿಕ, ಆರ್ಥಿಕ ಸಮೀಕ್ಷೆ ಇದಾಗಿದ್ದು, ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ತಿಳಿಸಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow