ದೀಪಾವಳಿ ಹಬ್ಬಕ್ಕೆ ಕೌಂಟ್ ಡೌನ್: ಪೋಲೀಸರು ಫುಲ್ ಅಲರ್ಟ್, ಮಹತ್ವದ ಸೂಚನೆ ಕೊಟ್ಟ ಕಮಿಷನರ್

ಅಕ್ಟೋಬರ್ 7, 2025 - 14:01
 0  10
ದೀಪಾವಳಿ ಹಬ್ಬಕ್ಕೆ ಕೌಂಟ್ ಡೌನ್: ಪೋಲೀಸರು ಫುಲ್ ಅಲರ್ಟ್, ಮಹತ್ವದ ಸೂಚನೆ ಕೊಟ್ಟ ಕಮಿಷನರ್

ಬೆಂಗಳೂರು:- ಬೆಳಕಿನ ಹಬ್ಬ ದೀಪಾವಳಿ ಗೆ ದಿನಗಣನೆ ಶುರುವಾಗಿದ್ದು, ಪೋಲೀಸರು ಫುಲ್ ಅಲರ್ಟ್ ಆಗಿದ್ದಾರೆ.ಎಸ್, ನಾಡಿನಾದ್ಯಂತ ದೀಪಾವಳಿ ಎಂದರೆ ಬೆಳಕಿನ ಸಂಭ್ರಮ. ಈ ದೀಪಾವಳಿಗೆ ಮತ್ತಷ್ಟು ಮೆರುಗು ಬರುವುದು ಕಗ್ಗತ್ತಲಲ್ಲಿ ಸಿಡಿಸುವ ಪಟಾಕಿಗಳಿಂದ. ಪಟಾಕಿಗಳೆಂದರೆ ಬಣ್ಣ ಬಣ್ಣದ ಬೆಂಕಿಯ ಚಿತ್ತಾರಗಳನ್ನು ನೋಡಿ ಖುಷಿ ಪಡುವುದು. ಆದರೆ, ಪಟಾಕಿ ಎಂದರೆ ಎಷ್ಟು ಖುಷಿಯೋ ಅಷ್ಟೇ ಆತಂಕ ಕೂಡ. 

ಅದರಂತೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪಟಾಕಿ ಮಾರಾಟಗಾರರ ಸಭೆಯಲ್ಲಿ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆಯನ್ನ ನೀಡಿದ್ದಾರೆ. ಕಳೆದ ಬಾರಿ ಅತ್ತಿಬೆಲೆಯಲ್ಲಿ ಹಾಗೂ ಮಾರ್ಕೆಟ್ ಭಾಗದಲ್ಲಿ ಪಟಾಕಿ ದುರಂತಗಳು ಆಗದ ಹಾಗೇ ಕಟ್ಟೆಚರ ವಹಿಸಲು ನಿರ್ದೇಶನ ನೀಡಿದ್ದಾರೆ. ಯಾವುದೇ ಪಟಾಕಿ ಮಾರಾಟಗಾರರಿಗೆ ಮುಂಗಡವಾಗಿ ಪಟಾಕಿ ಸಂಗ್ರಹಕ್ಕೆ ಅವಕಾಶ ಇಲ್ಲ. ಬೇಡಿಕೆ ಹೆಚ್ಚಿದೆ ಎಂದು ಪಟಾಕಿ ಓವರ್ ಲೋಡ್ ಸಂಗ್ರಹ ಮಾಡಿಕೊಂಡಿದ್ದು ಕಂಡು ಬಂದರೆ ಕಾನೂನು ಕ್ರಮದ ಎಚ್ಚರಿಕೆಯನ್ನ ನೀಡಿದ್ದಾರೆ.

ಅತಿಯಾಗಿ ಪಟಾಕಿಗಳನ್ನ ಗೋಡೌನ್‌ಗಳಲ್ಲಿ ಸಂಗ್ರಹ ಮಾಡಿಕೊಂಡರೆ ಅನಾಹುತಗಳಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಹಾಗಾಗಿ ಅನಾಹುತಗಳಿಗೆ ಆಸ್ಪದ ಕೊಡಬಾರದು ಅನ್ನೋ ಕಾರಣಕ್ಕೆ ಮುಂಚಿತವಾಗಿ ಪಟಾಕಿ ಸಂಗ್ರಹ ಮಾಡಿಕೊಳ್ಳುವುದಕ್ಕೆ ಅವಕಾಶ ಇರುವುದಿಲ್ಲ ಎಂದು ಪಟಾಕಿ ಮಾರಾಟಗಾರರಿಗೆ ಸೂಚನೆ ನೀಡಿದ್ದಾರೆ.

ಮಾರಾಟಗಾರರು ದೀಪಾವಳಿ ಹಬ್ಬಕ್ಕೆ 5 ದಿನ ಮುಂಚಿತವಾಗಿ ತಂದು ಐದು ದಿನಗಳ ಒಳಗಾಗಿ ಸ್ಟಾಕ್ ಖಾಲಿ ಮಾಡಿಕೊಳ್ಳಬೇಕು. ಸೆ.18 ರಿಂದ 22ರ ತನಕ ಒಟ್ಟು ಐದು ದಿನ ಪಟಾಕಿ ಮಾರಾಟ ಮಾಡುವುದಕ್ಕೆ ಅವಕಾಶ ಕಲ್ಪಿಸಿಕೊಡಲಾಗುತ್ತದೆ. ಅನಧಿಕೃತವಾಗಿ ಗೋಡೌನ್‌ಗಳಲ್ಲಿ ಪಟಾಕಿ ಸಂಗ್ರಹಣೆ ಬಗ್ಗೆ ಬೀಟ್ ಪೊಲೀಸರು ಪರಿಶೀಲನೆ ನಡೆಸುತ್ತಾರೆ. ಒಂದು ವೇಳೆ ಪಟಾಕಿ ಸಂಗ್ರಹ ಮಾಡಿಕೊಂಡಿರುವುದು ಕಂಡು ಬಂದರೆ ಅಂತಹ ಮಾರಾಟಗಾರರ ವಿರುದ್ಧ ಕಾನೂನು ಕ್ರಮ ಜರಗಿಸಲಾಗುತ್ತದೆ ಸೂಚನೆ ನೀಡಿದ್ದಾರೆ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow