ದೆಹಲಿಯಲ್ಲಿ ಎಎಪಿಗೆ ಬಿಗ್‌ಶಾಕ್! ಸೋಲುಂಡ ಅರವಿಂದ, ಅಧಿಕಾರದ ಗದ್ದುಗೆ ಏರಿದ ಕಮಲ!

ನವದೆಹಲಿ:-ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಎಎಪಿ ಸೋಲಿಸಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ.
ವಿಧಾನಸಭಾ ಚುನಾವಣೆ ಫಲಿತಾಂಶದಲ್ಲಿ ಎಎಪಿ ಪರಿಷ್ಠ ಅರವಿಂದ ಕೇಜ್ರಿವಾಲ್ ಅವರಿಗೆ ಭಾರಿ ಮುಖಭಂಗವಾಗಿದೆ. ನವದೆಹಲಿ ಕ್ಷೇತ್ರದಿಂದ ಬಿಜೆಪಿಯ ಪರ್ವೇಶ್ ವರ್ಮಾ ವಿರುದ್ಧ ಅವರಿಗೆ ಸೋಲಾಗಿದೆ. ಇದು ಎಎಪಿಗೆ ಅರಗಿಸಿಕೊಳ್ಳಲಾರದ ತುತ್ತಾಗಿ ಪರಿಣಮಿಸಿದೆ. ಅಬಕಾರಿ ಹಗರಣ ಹಾಗೂ ಭ್ರಷ್ಟಾಚಾರ ಆರೋಪಗಳು ಕೇಜ್ರಿವಾಲ್ ಸೋಲಿಗೆ ಪ್ರಮುಖ ಕಾರಣಗಳು ಎನ್ನಲಾಗುತ್ತಿದೆ.
ಸತತ ಎರಡು ಬಾರಿ ದೆಹಲಿಯ ಗದ್ದುಗೆ ಏರಿದ್ದ ಎಎಪಿ ಮತ್ತು ಕೇಜ್ರಿವಾಲ್ಗೆ ಈ ಬಾರಿ ಅಬಕಾರಿ ನೀತಿ ಹಗರಣದಿಂದ ಭಾರಿ ಹಿನ್ನಡೆಯಾಗಿತ್ತು. ಅದು ಮತದಾನದ ಮೇಲೂ ಪರಿಣಾಮ ಬೀರಿದಂತಿದೆ.
ದೆಹಲಿ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ದೆಹಲಿ ಗದ್ದುಗೆ ಹಿಡಿಯುವ ಕನಸು ಕಾಣುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿದೆ.
ಹೌದು.. ಶನಿವಾರ ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆಯ ಫಲಿತಾಂಶ ಪ್ರಕಟವಾಗುತ್ತಿದ್ದು, ಈ ವರೆಗಿನ ಫಲಿತಾಂಶ ವರದಿಯಲ್ಲಿ ಕಾಂಗ್ರೆಸ್ ತೀವ್ರ ಹಿನ್ನಡೆಯಲ್ಲಿದೆ. ಆಡಳಿತಾ ರೂಢ ಎಎಪಿ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆಯಾದರೂ ಈಗಾಗಲೇ ಬಿಜೆಪಿ ಮ್ಯಾಜಿಕ್ ನಂಬರ್ ದಾಟಿದೆ. ಆದರೆ ದೆಹಲಿಯಲ್ಲಿ ಸತತ 15 ವರ್ಷಗಳ ಆಡಳಿತ ನಡೆಸಿದ್ದ ಕಾಂಗ್ರೆಸ್ ಪಕ್ಷ ಈ ಬಾರಿ ಚುನಾವಣಾ ರೇಸ್ ನಲ್ಲಿ ತೀವ್ರ ಹಿಂದೆ ಬಿದ್ದಿದ್ದು ತಾನು ಸ್ಪರ್ಧಿಸಿದ್ದ ಎಲ್ಲ ಕ್ಷೇತ್ರಗಳಲ್ಲೂ ಹಿನ್ನಡೆ ಅನುಭವಿಸುತ್ತಿದೆ.
ನಿಮ್ಮ ಪ್ರತಿಕ್ರಿಯೆ ಏನು?






