ದೆಹಲಿಯಲ್ಲಿ ತ್ರಿವಳಿ ಕೊಲೆ ಕೇಸ್ ಗೆ ಟ್ವಿಸ್ಟ್: ಹೆಂಡ್ತಿ, ಮಕ್ಕಳನ್ನು ಕೊಲೆಗೈದು ಎಸ್ಕೇಪ್ ಆಗಿದ್ದ ಆರೋಪಿ ಅರೆಸ್ಟ್!

ಆಗಸ್ಟ್ 10, 2025 - 22:19
 0  21
ದೆಹಲಿಯಲ್ಲಿ ತ್ರಿವಳಿ ಕೊಲೆ ಕೇಸ್ ಗೆ ಟ್ವಿಸ್ಟ್: ಹೆಂಡ್ತಿ, ಮಕ್ಕಳನ್ನು ಕೊಲೆಗೈದು ಎಸ್ಕೇಪ್ ಆಗಿದ್ದ ಆರೋಪಿ ಅರೆಸ್ಟ್!

ನವದೆಹಲಿ:- ದೆಹಲಿಯಲ್ಲಿ ತ್ರಿವಳಿ ಕೊಲೆ ಕೇಸ್ ಗೆ ಟ್ವಿಸ್ಟ್ ಸಿಕ್ಕಿದ್ದು, ಹೆಂಡ್ತಿ, ಮಕ್ಕಳನ್ನು ಕೊಲೆಗೈದು ಎಸ್ಕೇಪ್ ಆಗಿದ್ದ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. 

29 ವರ್ಷದ ಪರ್ದೀಪ್ ಕಶ್ಯಪ್ ಬಂಧಿತ ಆರೋಪಿ. ಕೌಟುಂಬಿಕ ಕಲಹ ಅತಿರೇಕಕ್ಕೆ ಹೋಗಿ ವ್ಯಕ್ತಿಯೊಬ್ಬ ಪತ್ನಿ ಹಾಗೂ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದ. ಇದೀಗ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ದಂಪತಿ ನಡುವಿನ ದೀರ್ಘಕಾಲದ ಜಗಳ ಕೊಲೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ.ಆದರೂ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಆಗಸ್ಟ್ 9 ರಂದು ಬೆಳಗ್ಗೆ 7.15 ರ ಸುಮಾರಿಗೆ ಕರವಾಲ್ ನಗರ ಪೊಲೀಸ್ ಠಾಣೆಗೆ ಕೊಲೆಯ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಈಶಾನ್ಯ ಡಿಸಿಪಿ ಆಶಿಶ್ ಮಿಶ್ರಾ ತಿಳಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ತಂಡವೊಂದು ಸ್ಥಳಕ್ಕೆ ತಲುಪಿದಾಗ, 28 ವರ್ಷದ ಮಹಿಳೆ ಮತ್ತು ಆಕೆಯ 7 ಮತ್ತು 5 ವರ್ಷ ವಯಸ್ಸಿನ ಇಬ್ಬರು ಹೆಣ್ಣುಮಕ್ಕಳು ತಮ್ಮ ಕೋಣೆಯಲ್ಲಿ ಶವವಾಗಿ ಬಿದ್ದಿದ್ದರು. ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 103(1) ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಶಂಕಿತನನ್ನು ಪತ್ತೆಹಚ್ಚಲು ವಿಶೇಷ ಸಿಬ್ಬಂದಿ/ಈಶಾನ್ಯ ಸೇರಿದಂತೆ ಹಲವಾರು ತಂಡಗಳನ್ನು ನಿಯೋಜಿಸಲಾಗಿತ್ತು. ಪೊಲೀಸರು ಕಶ್ಯಪ್ ಅವರನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ ಆತ ತಾನು ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ಪತ್ನಿಯೊಂದಿಗೆ ನಿರಂತರ ವಿವಾದಗಳು ನಡೆಯುತ್ತಿತ್ತು ಎಂದು ಆತ ಹೇಳಿದ್ದಾನೆ. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ದೆಹಲಿಯ ಜಿಟಿಬಿ ಆಸ್ಪತ್ರೆಗೆ ಕಳುಹಿಸಲಾಯಿತು. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow