ಧರ್ಮಸ್ಥಳ ಕೇಸ್: ಎಸ್ಐಟಿ ರಚಿಸಿದ್ದು ಒಳ್ಳೇದಾಯ್ತು ಎಂದ ವೀರೇಂದ್ರ ಹೆಗ್ಡೆ

ಸೆಪ್ಟೆಂಬರ್ 26, 2025 - 21:16
 0  16
ಧರ್ಮಸ್ಥಳ ಕೇಸ್: ಎಸ್ಐಟಿ ರಚಿಸಿದ್ದು ಒಳ್ಳೇದಾಯ್ತು ಎಂದ ವೀರೇಂದ್ರ ಹೆಗ್ಡೆ

ಮಂಗಳೂರು:- ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಸರ್ಕಾರ ಎಸ್ಐಟಿ ರಚಿಸಿದ್ದು ಒಳ್ಳೇದಾಯ್ತು ಎಂದು ವೀರೇಂದ್ರ ಹೆಗ್ಡೆ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ನಾನು ಆಭಾರಿ, ಎಸ್‌ಐಟಿ  ರಚಿಸಿದ ಕಾರಣ ಸತ್ಯ ಹೊರಬರುತ್ತಿದೆ. ಕೋವಿಡ್ ಹಾಗೂ ಈಗ ಅನೇಕ ಪುಸ್ತಕಗಳನ್ನು ನಾನು ಓದುತ್ತಿದ್ದೇನೆ. ಸಿದ್ದಗಂಗಾ ಶ್ರೀಗಳ ಹಲವು ಪುಸ್ತಕ ನಾನು ಓದಿದ್ದೇನೆ. ನಮ್ಮನ್ನ ಹೊಗಳಿದ್ದೀರಿ, ಆದರೆ ನಮ್ಮ ಸೇವೆ ಧರ್ಮ ನಮಗೆ ಮುಖ್ಯ ಅಂತ ಇದೆ. ಸಿದ್ದಗಂಗಾ ಶ್ರೀಗಳು 108 ವರ್ಷ ಬದುಕಿದವರು ಹೇಳಿದ ಮಾತು. ಶತ್ರುತ್ವ ಯಾಕೆ ಬಂತು ಅಂತ ನಮಗೆ ಗೊತ್ತಿಲ್ಲ. ಇಷ್ಟು ಹಗೆತನ, ಅಪವಾದ ಯಾಕೆ ಬಂತು ಅಂತ ಗೊತ್ತಿಲ್ಲ. ನಾವು ಸೇವೆ ಮಾಡುತ್ತೇವೆ, 

ಆದರೆ ಸೇವೆ ಪ್ರಚಾರದ ವಸ್ತುವಲ್ಲ. ಇಷ್ಟು ವರ್ಷ ನಾವು ಆರೋಗ್ಯವಾಗಿರಲು ನಮ್ಮ ನಿಸ್ವಾರ್ಥ ಸೇವೆಯೇ ಕಾರಣ. ನಮ್ಮ ಎಲ್ಲಾ ಕಾರ್ಯಕ್ರಮಗಳನ್ನು ನೀವು ಎಲ್ಲರೂ ಗಮನಿಸಿದ್ದೀರಿ. ನಾವು ಇಲ್ಲಿ ನಿಮಿತ್ತ ಮಾತ್ರ, ಆದರೆ ಮುಂದುವರೆಸಿಕೊಂಡು ಹೋಗಿದ್ದು ಅದಕ್ಕೆ ಸಂಬಂಧಪಟ್ಟ ಇಲಾಖೆಯವರು. ಕೆಲವರು ಪ್ರೀತಿಯಲ್ಲಿ ಟೀಕೆ ಮಾಡಿದ್ರು, ಇವರು ಹಾಗೆ ಟೀಕೆ ಮಾಡಿಲ್ಲ. ನಿಮಗೆ ನಾನು ಎಷ್ಟು ಕೃತಜ್ಞತೆ ಸಲ್ಲಿಸಿದರೂ ಕಡಿಮೆಯೇ ಎಂದರು.

ಧರ್ಮಸ್ಥಳ  ಬೇರೆ, ಧರ್ಮಸ್ಥಳದ ಊರಿನವರು ಬೇರೆ ಅಲ್ಲ. ಎಷ್ಟು ನಿಷ್ಠುರವಾಗಿ ನಮ್ಮ ಮೇಲೆ ದಬ್ಬಾಳಿಕೆ ನಡೆದಿದೆ ಅಂತ ನೀವು ನೋಡಿದ್ದೀರಿ. ಯಾಕೆ ಇಷ್ಟು ದ್ವೇಷ ನನ್ನ ಮೇಲೆ ಇದೆ ಅಂತ ನನಗೆ ಗೊತ್ತಾಗಿಲ್ಲ. ಈಗ ಮನಸ್ಸು ಸ್ವಲ್ಪ ಹಗುರವಾಗಿದೆ, ಎತ್ತರದ ಬೆಟ್ಟದಿಂದ ನೀರು ಹರಿದಿದೆ. ನಮ್ಮ ಮೇಲೆ ದೃಢವಾದ ನಂಬಿಕೆ ಇಟ್ಟ ಎಲ್ಲರಿಗೂ ನಾನು ಆಭಾರಿ. ಈಗಾಗಲೇ ಲಕ್ಷಾಂತರ ಜನರು ಇಲ್ಲಿಗೆ ಬಂದು ಹೋಗಿದ್ದಾರೆ. ನಿಮ್ಮ ಧರ್ಮ ಸೋತರೆ, ನಮ್ಮ ಧರ್ಮ ಸೋತ ಹಾಗೆ ಅಂತ ಹೇಳಿದ್ದಾರೆ. ಈ ಶತ್ರುತ್ವ ಯಾಕೆ ಅಂತ ಕೇಳ್ತಾರೆ, ನನಗೂ ಈ ದ್ವೇಷ ಯಾಕೆ ಅಂತ ಬೇಕು. ನಾವು ಯಾರನ್ನೂ ಹೀಯಾಳಿಸಿಲ್ಲ, ದ್ವೇಷ ಕೂಡ ಮಾಡಿಲ್ಲ. ನಾವು ತಪ್ಪು ಮಾಡದ ಕಾರಣ ನಮಗೆ ಆತ್ಮವಿಶ್ವಾಸ ಇದೆ ಎಂದು ಹೇಳಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow