ಧರ್ಮಸ್ಥಳ ಪ್ರಕರಣ ಬಿಗ್ ಟ್ವಿಸ್ಟ್: ಯಾವುದೇ ಕ್ಷಣದಲ್ಲಿ ಯೂಟ್ಯೂಬರ್ ಸಮೀರ್ MD ಬಂಧನ ಸಾಧ್ಯತೆ!
ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರೀ ಸುದ್ದಿಯಲ್ಲಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸರು ವಶಕ್ಕೆ ಪಡೆದ ಕೆಲವೇ ಗಂಟೆಗಳಲ್ಲೇ, ಯೂಟ್ಯೂಬರ್ ಸಮೀರ್ ಕೂಡ ಬಂಧನ ಭೀತಿಯನ್ನು ಎದುರಿಸುತ್ತಿದ್ದಾರೆ.
ಇಂದು ಬೆಳಗ್ಗೆ ಉಡುಪಿಯ 20ಕ್ಕೂ ಹೆಚ್ಚು ಪೊಲೀಸರು ಬೆಳ್ತಂಗಡಿಯಲ್ಲಿರುವ ಹಿಂದೂ ಜಾಗರಣ ವೇದಿಕೆ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಯಲ್ಲಿ ಕಾರ್ಯಾಚರಣೆ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದರು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ನ್ನು ಕೂಡ ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಮಾಹಿತಿಯ ಪ್ರಕಾರ, ಬೆಳಗ್ಗೆ 6 ಗಂಟೆಯಿಂದಲೇ ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಸಮೀರ್ ಮನೆಗೆ ಪೊಲೀಸರು ಸುತ್ತುವರಿದಿದ್ದರು. ಕೋರ್ಟ್ನಿಂದ ಆದೇಶ ಪ್ರತಿಗಾಗಿ ಪೊಲೀಸರು ಕಾಯುತ್ತಿದ್ದು, ಅದು ಕೈ ಸೇರಿದ ತಕ್ಷಣ ಧರ್ಮಸ್ಥಳ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆನಂದ್ ಎನ್. ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭವಾಗಲಿದೆ. ಸಮೀರ್ನ್ನು ವಶಕ್ಕೆ ಪಡೆದು ಬೆಳ್ತಂಗಡಿಗೆ ಕರೆತರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ನಿಮ್ಮ ಪ್ರತಿಕ್ರಿಯೆ ಏನು?