ನಟ ದರ್ಶನ್ ಜಾಮೀನು ಪಡೆದ ಬಳಿಕ ದುರ್ಗಾದೇವಿಗೆ ಪೂಜೆ ಸಲ್ಲಿಸಿದ ವಿಜಯಲಕ್ಷ್ಮಿ!

ಬಳ್ಳಾರಿ: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಅವರಿಗೆ ಕೊನೆಗೂ 131 ದಿನಗಳ ಬಳಿಕ ಮಧ್ಯಂತರ ಜಾಮೀನು ಸಿಕ್ಕಿದೆ. ದರ್ಶನ್ ಅವರಿಗೆ ಬೆನ್ನು ನೋವು ಇದ್ದ ಕಾರಣ ಅವರಿಗೆ ಜಾಮೀನು ನೀಡಬೇಕೆಂದು ದರ್ಶನ್ ಪರ ವಕೀಲ ಸಿ.ವಿ ನಾಗೇಶ್ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದರು.
ಇದೀಗ ಕರ್ನಾಟಕ ಹೈಕೋರ್ಟ್ ನಟ ದರ್ಶನ್ ಅವರ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಬೆನ್ನು ನೋವಿನ ಸಮಸ್ಯೆಗೆ ತುರ್ತು ಚಿಕಿತ್ಸೆಯ ಅಗತ್ಯ ಹಿನ್ನೆಲೆ ಆರು ವಾರಗಳ ಅವಧಿ ಅಂದ್ರೆ ಸುಮಾರು 45 ದಿನಗಳ ಕಾಲದ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಸುದ್ದಿ ದರ್ಶನ್ ಅಭಿಮಾನಿಗಳಿಗೆ ದೀಪಾವಳಿ ಹಬ್ಬಕ್ಕೆ ಬಂಪರ್ ಉಡುಗೊರೆ ಸಿಕ್ಕಂತಾಗಿದೆ.
ಇದರ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮೀ ಬಳ್ಳಾರಿಯ ಕನಕ ದುರ್ಗಮ್ಮ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಟ ದರ್ಶನ್ ಗೆ ಜಾಮೀನು ಮಂಜೂರಾಗುತ್ತಿದ್ದಂತೆ ಬಳ್ಳಾರಿ ಜೈಲಿಗೆ ತೆರಳಿ, ಪತಿಯನ್ನು ಭೇಟಿಯಾದ ವಿಜಯಲಕ್ಷ್ಮೀ ಬಳಿಕ ಬಳ್ಳಾರಿಯ ಕನಕ ದುರ್ಗಮ್ಮ ದೇವಾಲಯಕ್ಕೆ ಆಗಮಿಸಿದರು.
ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ದೇವಿಯ ಕೃಪೆಗೆ ಪಾತ್ರರಾದರು. ನಟ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ಸಿಗುತ್ತಿದ್ದಂತೆ ಅವರ ಅಭಿಮಾನಿಗಳ ದೀಪಾವಳಿ ಶುರುವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಸೆಲಬ್ರೇಷನ್ ನಡೆಸುತ್ತಿರುವ ಅಭಿಮಾನಿಗಳು ದರ್ಶನ್ ರಿಲೀಸ್ ಆಗುವುದನ್ನೇ ಕಾಯುತ್ತಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






