ನಟ ದರ್ಶನ್ʼಗೆ ಸಿಕ್ತು ದೀಪಾವಳಿ ಗಿಫ್ಟ್: ಮಧ್ಯಂತರ ಜಾಮೀನು ನೀಡಿದ ಹೈಕೋರ್ಟ್

ಅಕ್ಟೋಬರ್ 30, 2024 - 10:51
 0  29
ನಟ ದರ್ಶನ್ʼಗೆ ಸಿಕ್ತು ದೀಪಾವಳಿ ಗಿಫ್ಟ್: ಮಧ್ಯಂತರ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರು: ಬೆನ್ನು ನೋವಿನಿಂದ ಬಳಲುತ್ತಿದ್ದ ದರ್ಶನ್​​ಗೆ ಚಿಕಿತ್ಸೆಯ ಅನಿವಾರ್ಯತೆ ಇರುವ ಕಾರಣ ಮಧ್ಯಂತರ ಜಾಮೀನು ಸಿಕ್ಕಿದೆ. ಹೌದು .  ಹೈಕೋರ್ಟ್‌ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ದರ್ಶನ್‌ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ

ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲ ಸಿ.ವಿ ನಾಗೇಶ್, ದರ್ಶನ್ ನೋವು ಉಲ್ಲೇಖಿಸಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಅವಶ್ಯಕತೆ ಇದೆ. ಇಲ್ಲವಾದಲ್ಲಿ ದರ್ಶನ್ ಒಂದು ಕಾಲಿಗೆ ಆಗಿರುವ ಸಮಸ್ಯೆ ಎರಡೂ ಕಾಲಿಗೆ ಆಗಬಹುದು. ಹೀಗಾಗಿ 3 ತಿಂಗಳು ಮಧ್ಯಂತರ ಜಾಮೀನು ನೀಡಬೇಕೆಂದು ಮನವಿ ಮಾಡಿದ್ದರು. ಈ ವಾದಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್‌ ಪ್ರಸನ್ನ ಕುಮಾರ್ ತೀವ್ರ ಆಕ್ಷೇಪಿಸಿದ್ದರು.

ಮೈಸೂರಿನಲ್ಲಿ ಶೂಟಿಂಗ್‌ ತೆರಳಿದ್ದ ದರ್ಶನ್‌ ಅವರನ್ನು ಪೊಲೀಸರು ಜೂನ್ 11 ರಂದು ಬೆಂಗಳೂರಿಗೆ ಕರೆ ತಂದು ಬಂಧಿಸಿದ್ದರು. 11 ದಿನಗಳ ಕಾಲ ಪೊಲೀಸರ ಕಸ್ಟಡಿಯಲ್ಲಿ ವಿಚಾರಣೆ ಎದುರಿಸಿದ್ದ ದರ್ಶನ್ ಬಳಿಕ ವಿಚಾರಣಾ ಕೈದಿಯಾಗಿ ಜೈಲು ಸೇರಿದ್ದರು. ಜೂನ್ 22ಕ್ಕೆ ನ್ಯಾಯಾಂಗ ಬಂಧನ ಜಾರಿಯಾಗಿತ್ತು.  ಪರಪ್ಪನ ಅಗ್ರಹಾರ ಜೈಲಲ್ಲಿ ಪಾರ್ಟಿ ಮಾಡಿದ ಫೋಟೋ ವೈರಲ್‌ ಆದ ನಂತರ ಕೋರ್ಟ್‌ ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಿಸಿತ್ತು. 69 ದಿನ ಪರಪ್ಪನ ಅಗ್ರಹಾರದಲ್ಲಿ ಕಳೆದ ದರ್ಶನ್ ಆಗಸ್ಟ್ 29 ಕ್ಕೆ ಬಳ್ಳಾರಿ ಜೈಲಿಗೆ ಆಗಮಿಸಿದ್ದರು. 5 ತಿಂಗಳಿನಿಂದ ಕಂಬಿ ಹಿಂದೆ ಕಾಲ ಕಳೆದಿದ್ದ ದರ್ಶನ್‌ಗೆ ಈಗ ಬಿಡುಗಡೆಯಾಗುವ ಭಾಗ್ಯ ಸಿಕ್ಕಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow