ನಟ ಸುದೀಪ್ ತಾಯಿ ನಿಧನ: ಜೆಪಿ ನಗರದ ನಿವಾಸದಲ್ಲಿ ಅಂತಿಮ ದರ್ಶನ

ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಇಂದು ಮುಂಜಾನೆ ನಿಧಾನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ ಇಂದು ಮುಂಜಾನೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಬೆಳಿಗ್ಗೆ 7 ಗಂಟೆಗೆ ನಿಧನ ಹೊಂದಿದ್ದಾರೆ.
ಇನ್ನೂ ಜೆಪಿ ನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಜಯನಗರದ ಅಪೋಲೋ ಆಸ್ಪತ್ರೆಯಿಂದ ಸರೋಜಾ ಅವರ ಪಾರ್ಥಿವ ಶರೀರವನ್ನು ಅಂಬುಲೆನ್ಸ್ ಮೂಲಕ ಜೆಪಿ ನಗರದ ನಿವಾಸಕ್ಕೆ ತರಲಾಗಿದೆ. ಈ ವೇಳೆ ನಟ ಕಿಚ್ಚ ಸುದೀಪ್ ಅವರು ಕೂಡ ಅಂಬುಲೆನ್ಸ್ನಲ್ಲಿಯೇ ಮನೆಗೆ ತೆರಳಿದ್ದಾರೆ.
ಮನೆ ಬಳಿ ಅಂತಿಮ ದರ್ಶನಕ್ಕೆ ಶಾಮಿಯಾನ ಹಾಕಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸುದೀಪ್ ಮನೆ ರಸ್ತೆಗೆ ಬ್ಯಾರಿಕೇಡ್ ಅಳವಡಿಕೆ ಮಾಡಿದ್ದು, ಮನೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ನೀಡಲಾಗಿದೆ. ಅಭಿಮಾನಿಗಳು ಮನೆ ಬಳಿ ಜಮಾಯಿಸುವ ಹಿನ್ನೆಲೆ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಅಂತಿಮ ದರ್ಶನದ ಬಳಿಕ ಸಂಜೆ 5 ಗಂಟೆಗೆ ವಿಲ್ಸನ್ ಗಾರ್ಡನ್ನಲ್ಲಿರುವ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಮಾಡಲಾಗಿದೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






