ನಟ ಸೈಫ್ ಅಲಿಗೆ ಸಂಕಷ್ಟ: 15 ಸಾವಿರ ಕೋಟಿ ಆಸ್ತಿ ನಷ್ಟ- ಆಸ್ಪತ್ರೆಯಿಂದ ಬರುತ್ತಿದ್ದಂತೆ ಬಿಗ್ ಶಾಕ್!

ದರೋಡೆಕೋರರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ಸೇರಿದ್ದ ನಟ ಸೈಫ್ ಅಲಿಗೆ ಬಿಗ್ ಶಾಕ್ ಎದುರಾಗಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಮಧ್ಯಪ್ರದೇಶದಲ್ಲಿರುವ 15 ಸಾವಿರ ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಬಾಲಿವುಡ್ ಸ್ಟಾರ್ ಸೈಫ್ ಅಲಿ ಖಾನ್ ಅವರು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಕೊಹೆಫಿಜಾ ಪ್ರದೇಶದಿಂದ ಭೋಪಾಲ್‌ನ ಚಿಕ್ಲೋಡ್‌ವರೆಗೆ ಸೈಫ್ ಅಲಿ ಖಾನ್ ಅವರ ಪಟೌಡಿ ಕುಟುಂಬದ ಪೂರ್ವಿಕರ ಆಸ್ತಿ ವಿಸ್ತರಿಸಿದೆ. ಇದನ್ನು ಶತ್ರು ಆಸ್ತಿ ಎಂದು 2014ರಲ್ಲಿ ಕೇಂದ್ರ ಸರ್ಕಾರ ಘೋಷಿಸಿತ್ತು. ಅಲ್ಲದೇ ಈ ಆಸ್ತಿ ಮೇಲೆ ಪಟೌಡಿ ಕುಟುಂಬದ ಉತ್ತರಾಧಿಕಾರಿಗೆ ಯಾವುದೇ ಹಕ್ಕು ಇರುವುದಿಲ್ಲ ಎಂದು ಸ್ಪಷ್ಟಪಡಿಸಿ ನೋಟಿಸ್ ಜಾರಿ ಮಾಡಲಾಗಿತ್ತು. ಈ ನೋಟಿಸ್ ವಿರುದ್ಧ ಮಧ್ಯಪ್ರದೇಶ ಹೈಕೋರ್ಟ್ಗೆ ಸೈಫ್ ಅಲಿ ಖಾನ್ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ಇದೀಗ ಹೈಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿ ವಿವೇಕ್ ಅಗರ್ವಾಲ್ ಅವರ ಏಕಸದಸ್ಯ ಪೀಠವು ಡಿಸೆಂಬರ್ 13, 2024 ರಂದು ನಡೆದ ವಿಚಾರಣೆಯ ಸಂದರ್ಭದಲ್ಲಿ ಸೈಫ್ ಅಲಿ ಖಾನ್ ಅರ್ಜಿ ವಜಾಗೊಳಿಸಿದೆ. ನಟನ ಕುಟುಂಬಕ್ಕೆ ಮೇಲ್ಮನವಿ ಸಲ್ಲಿಸಲು ಜನವರಿ 13ರವರೆಗೆ ಅವಕಾಶ ಇತ್ತು ಆದರೆ ಅವರು ಮೇಲ್ಮನವಿ ಸಲ್ಲಿಸಿಲ್ಲ ಎಂದು ತಿಳಿದು ಬಂದಿದೆ.
ಇಷ್ಟು ದಿನ ಕೇಂದ್ರ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಹೈಕೋರ್ಟ್, ಆದರೆ ಈಗ ತಡೆಯಾಜ್ಞೆ ತೆರವುಗೊಳಿಸಿದೆ. ಇದರಿಂದ ಕೇಂದ್ರ ಸರ್ಕಾರದ ಆಸ್ತಿಗಳನ್ನು ತನ್ನ ವಶಕ್ಕೆ ತೆಗೆದುಕೊಳ್ಳಬಹುದು.
ಈ ಮಧ್ಯೆ ಸೈಫ್ ಅಲಿಖಾನ್ ಪಟೌಡಿ ಕುಟುಂಬ ಸುಪ್ರೀಂ ಕೋರ್ಟ್ನಿಂದ ರಿಲೀಫ್ ಪಡೆಯದಿದ್ದರೇ 15 ಸಾವಿರ ಕೋಟಿ ಆಸ್ತಿ ಕೇಂದ್ರ ಸರ್ಕಾರದ ವಶವಾಗುವುದು ಪಕ್ಕಾ ಎಂದು ಹೇಳಲಾಗ್ತಿದೆ. ಅಲ್ಲದೇ ಸೈಫ್ ಅಲಿ ಖಾನ್ ಪಟೌಡಿ ಕುಟುಂಬಕ್ಕೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಇನ್ನೂ ಅವಕಾಶ ಇದೆ.
ನಿಮ್ಮ ಪ್ರತಿಕ್ರಿಯೆ ಏನು?






