ನಟಿ ಭಾವನಾ ರಾಮಣ್ಣಗೆ ಹೆರಿಗೆ: ಒಂದು ಮಗು ನಿಧನ!
ಮದುವೆ ಆಗದೇ 40ನೇ ವಯಸ್ಸಿನಲ್ಲಿ ಗರ್ಭಿಣಿಯಾಗಿ ಅವಳಿ ಮಕ್ಕಳಿಗೆ ಜನ್ಮ ನೀಡುವ ಖುಷಿಯಲ್ಲಿದ್ದ ನಟಿ ಭಾವನಾ ರಾಮಣ್ಣಗೆ ಆಘಾತವೂ ಆಗಿದೆ. ಹೆಣ್ಣು ಮಗುವಿಗೆ ಜನ್ಮ ನೀಡಿ ನಟಿ ಆರೋಗ್ಯವಾಗಿದ್ದರೆ, ಮತ್ತೊಂದು ಮಗು ಹುಟ್ಟಿದಾಗಲೇ ತೀರಿಕೊಂಡಿದೆ.
ನಟಿ ಭಾವನ ರಾಮಣ್ಣಗೆ ಎರಡು ವಾರಗಳ ಹಿಂದೆ ಹೆರಿಗೆಯಾಗಿದ್ದು, ಹೆಣ್ಣು ಮಗುವಿಗೆ ತಾಯಿಯದ ನಟಿ ಭಾವನಾ ಅವರು ಸದ್ಯ ಆರೋಗ್ಯವಾಗಿದ್ದಾರೆ. ಆದ್ರೆ ಒಂದು ಮಗು ನಿಧನವಾಗಿದೆ. ವೈದ್ಯರ ಸೂಚನೆಯಂತೆ ಹೆರಿಗೆ ಮಾಡಲಾಗಿದ್ದು, ಒಂದು ಮಗುವಿನಲ್ಲಿ 7 ತಿಂಗಳ ನಂತರ ಸಮಸ್ಯೆ ಕಾಣಿಸಿಕೊಂಡ ಕಾರಣ 8 ತಿಂಗಳಿಗೆ ಹೆರಿಗೆ ಮಾಡಿಸಲಾಗಿದೆ. ಸದ್ಯ ಒಂದು ಮಗು, ತಾಯಿ ಇಬ್ಬರು ಕ್ಷೇಮವಾಗಿದ್ದು, ಮತ್ತೊಂದು ಮಗು ಹುಟ್ಟಿದಾಗಲೇ ತೀರಿಕೊಂಡಿದೆ ಎನ್ನಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?