ನಟಿ ರನ್ಯಾ ವಿರುದ್ಧ ಅಶ್ಲೀಲ ಹೇಳಿಕೆ ನೀಡಿದ್ದ ಶಾಸಕ ಯತ್ನಾಳ್ ವಿರುದ್ಧ FIR ದಾಖಲು!

ಮಾರ್ಚ್ 19, 2025 - 11:59
 0  13
ನಟಿ ರನ್ಯಾ ವಿರುದ್ಧ ಅಶ್ಲೀಲ ಹೇಳಿಕೆ ನೀಡಿದ್ದ ಶಾಸಕ ಯತ್ನಾಳ್ ವಿರುದ್ಧ FIR ದಾಖಲು!

ಬೆಂಗಳೂರು: ದುಬೈನಿಂದ ಕೋಟಿ, ಕೋಟಿ ಬೆಲೆ ಬಾಳುವ ಚಿನ್ನ ಕಳ್ಳ ಸಾಗಾಟದ ಆರೋಪದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ನಟಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿದೆ. ಸದ್ಯ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ರನ್ಯಾ ರಾವ್‌ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದಾರೆಂದು ಆರೋಪಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ FIR ದಾಖಲಾಗಿದೆ.

ರನ್ಯಾ ರಾವ್‌ ಪರ ಅಕುಲ ಅನುರಾಧ ಎಂಬವರು ಯತ್ನಾಳ್‌ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಯತ್ನಾಳ್‌ ಅವರು ಅವಾಚ್ಯ ಪದ ಬಳಸಿ ನಟಿಯ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನನ್ವಯ ಬಿಎನ್‌ಎಸ್‌ ಸೆಕ್ಷನ್‌ 79 ಅಡಿ ಎಫ್‌ಐಆರ್‌ ದಾಖಲಾಗಿದೆ.

ಯತ್ನಾಳ್‌ ಅವರು ಅವಾಚ್ಯ ಪದ ಬಳಸಿ ನಟಿಯ ತೇಜೋವಧೆ ಮಾಡಿದ್ದಾರೆ ಎಂದು ರನ್ಯಾ ರಾವ್‌ ಪರ ಅಕುಲ ಅನುರಾಧ ಎಂಬವರು ಆರೋಪಿಸಿ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಈಗ ಯತ್ನಾಳ್ ವಿರುದ್ಧ ಬಿಎನ್‌ಎಸ್‌ ಸೆಕ್ಷನ್‌ 79 ಅಡಿಯಲ್ಲಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಆಕೆ ದೇಹದಾದ್ಯಂತ ಚಿನ್ನವನ್ನು ಹೊಂದಿದ್ದಳು, ರಂಧ್ರಗಳನ್ನು ಹೊಂದಿರುವಲ್ಲೆಲ್ಲಾ ಅದನ್ನು ಬಚ್ಚಿಟ್ಟಿದ್ದಳು” ಎಂದು ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಸಂಬಂಧ ರನ್ಯಾ ಪರವಾಗಿ ಅಕುಲ ಅನುರಾಧ  ಅವರು ದೂರು ನೀಡಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow