ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ ಪ್ರಕರಣ: ಇಬ್ಬರು ಅರೆಸ್ಟ್

ಬೆಂಗಳೂರು:- ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ ಗಳಿಂದ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಸೈಬರ್ ಕ್ರೈಂ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿ ಆರೋಪಿಗಳು ನಟಿಗೆ ನಿಂದಿಸಿದರು. ಅಶ್ಲೀಲವಾಗಿ ಕಾಮೆಂಟ್ ಮಾಡಿ ಕಿಡಿಗೇಡಿಗಳು ನಿಂದಿಸಿದರು. ಇಬ್ಬರನ್ನ ಬಂಧಿಸಿ ವಿಚಾರಣೆ ನಡೆಸಿರುವ ಸೈಬರ್ ಕ್ರೈಮ್ ಪೊಲೀಸರು, ಒಟ್ಟು ಈವರೆಗೆ ನಾಲ್ವರನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.
ಪೊಲೀಸರಿಗೆ ದೂರು ನೀಡಿದ್ದ ರಮ್ಯಾ :ನಟ ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡು ಅಶ್ಲೀಲ ಸಂದೇಶ ರವಾನೆ, ಕಾಮೆಂಟ್ ಮಾಡುತ್ತಿದ್ದವರ ವಿರುದ್ಧ ಜುಲೈ 28ರಂದು ಖುದ್ದು ರಮ್ಯಾ ಅವರೇ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು.
ಅದರನ್ವಯ ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆ ಕಾಯ್ದೆ 2023ರ 351(2) (ಕ್ರಿಮಿನಲ್ ಬೆದರಿಕೆಯ ಉದ್ದೇಶದ ಅಪರಾಧ), 351(3) (ಸಾವು, ತೀವ್ರ ನೋವುಂಟು ಮಾಡುವ ಉದ್ದೇಶದ ಕ್ರಿಮಿನಲ್ ಬೆದರಿಕೆ), 352 (ಉದ್ದೇಶಪೂರ್ವಕ ಅವಮಾನದ ಮೂಲಕ ಶಾಂತಿಭಂಗದ ಯತ್ನ), 75(1) (ಲೈಂಗಿಕ ಕಿರುಕುಳ) 75(1)(IV) (ಲೈಂಗಿಕ ಟೀಕೆ) ಹಾಗೂ 79 (ಮಹಿಳೆಯ ಗೌರವಕ್ಕೆ ಧಕ್ಕೆ) ಆರೋಪದಡಿಯಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ನಿಮ್ಮ ಪ್ರತಿಕ್ರಿಯೆ ಏನು?






