ನನ್ನ-ಡಿಕೆಶಿ ಮಧ್ಯೆ ತಂದಿಡುವ ಕೆಲಸ ಮಾಡಿದ್ರೆ ಆಗಲ್ಲ.. ನಾವು ಒಟ್ಟಾಗಿಯೇ ಇದ್ದೇವೆ - ಸಿದ್ದರಾಮಯ್ಯ!

ಮೈಸೂರು:- ನಮ್ಮ ಸರ್ಕಾರ 5 ವರ್ಷ ಬಂಡೆ ರೀತಿ ಇರುತ್ತೆ. ನನ್ನ-ಡಿಕೆಶಿ ಮಧ್ಯೆ ತಂದಿಡುವ ಕೆಲಸ ಮಾಡಿದ್ರೆ ಆಗಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್‌ನಲ್ಲಿ ಕ್ರಾಂತಿ ನಡೆಯಲಿದೆ ಎಂಬ ಬಿರುಗಾಳಿ ಎದ್ದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಾನು ಮತ್ತು ಡಿಕೆ ಶಿವಕುಮಾರ್ ಒಟ್ಟಾಗಿಯೇ ಇದ್ದೇವೆ. ನಮ್ಮ ಸರ್ಕಾರ ಬಂಡೆ ರೀತಿ 5 ವರ್ಷ ಇರಲಿದೆ ಎಂದು ಹೇಳಿದರು
ನಮ್ಮಿಬ್ಬರ ಮಧ್ಯೆ ತಂದಿಡುವ ಪ್ರಯತ್ನವನ್ನು ಮಾಡಿದರೂ ಅದು ಆಗುವುದಿಲ್ಲ. ನಮ್ಮ ಬಗ್ಗೆ ಮಾತನಾಡುವ ಶ್ರೀರಾಮಲು ಎಷ್ಟು ಚುನಾವಣೆ ಸೋತಿದ್ದಾನೆ ಹೇಳಿ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸಿಮರು ಎಂದರು. ನಾನೇ ದಸರಾ ಉದ್ಘಾಟನೆ ಮಾಡುತ್ತೇನೆ ಎಂದು ಮಾಧ್ಯಮದವರಿಗೆ ಅನಿಸಿದೆ ಅಲ್ವಾ. ಅದೇ ಸತ್ಯ ಎಂದು ಹೇಳುವ ಮೂಲಕ ಈ ಬಾರಿ ಸಿದ್ದರಾಮಯ್ಯ ದಸರಾ ಉದ್ಘಾಟನೆ ಮಾಡುವುದಿಲ್ಲ ಎಂದಿದ್ದ ಅಶೋಕ್‌ಗೆ ತಿರುಗೇಟು ನೀಡಿದರು.
ನಿಮ್ಮ ಪ್ರತಿಕ್ರಿಯೆ ಏನು?






