"ನನ್ನನ್ನು ಕ್ಷಮಿಸಿ": ಡೆತ್ ನೋಟ್ ಬರೆದಿಟ್ಟು 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಆಗಸ್ಟ್ 4, 2025 - 12:03
ಆಗಸ್ಟ್ 4, 2025 - 12:04
 0  6
"ನನ್ನನ್ನು ಕ್ಷಮಿಸಿ": ಡೆತ್ ನೋಟ್ ಬರೆದಿಟ್ಟು 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ನಗರದ ಸಿಕೆ ಅಚ್ಚುಕಟ್ಟು ಪ್ರದೇಶದಲ್ಲಿ 14 ವರ್ಷದ ಬಾಲಕನೊಬ್ಬ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಸಂಭವಿಸಿದೆ. ಗಾಂದಾರ್ (14) ಎಂಬ ಬಾಲಕ, 7ನೇ ತರಗತಿಯಲ್ಲಿ ಓದುತ್ತಿದ್ದನು.

ಗಾಂದಾರ್ ತಂದೆ ಗಣೇಶ್ ಪ್ರಸಾದ್ ಮ್ಯೂಸಿಕ್ ಆರ್ಟಿಸ್ಟ್ ಆಗಿದ್ದು, ಅವರು ಬೆಳಿಗ್ಗೆ ಮಗನ ಕೋಣೆಗೆ ಹೋಗಿದಾಗ ಘಟನೆ ಬೆಳಕಿಗೆ ಬಂದಿದೆ. ಮಲಗಿದ್ದ ಸ್ಥಳದಲ್ಲೇ ಗಾಂದಾರ್ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನೋಡಿದ ಅವರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳದಿಂದ ಒಂದು ಪುಟದ ಡೆತ್ ನೋಟ್ ಪತ್ತೆಯಾಗಿದೆ. ಡೆತ್ ನೋಟ್ನಲ್ಲಿ ತನ್ನ ತಂದೆ, ತಾಯಿ ಮತ್ತು ಸ್ನೇಹಿತರನ್ನು ಉದ್ದೇಶಿಸಿ ಕ್ಷಮೆ ಕೇಳಿರುವುದಾಗಿ ತಿಳಿದುಬಂದಿದೆ. "ನನ್ನನ್ನು ಕ್ಷಮಿಸಿ" ಎಂಬ ಪದಗಳು ಬರೆದಿದ್ದು, ಸಂಬಂಧ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಾವು ಹಿಂದೆ ಏನೆಲ್ಲಾ ಕಾರಣಗಳಿರಬಹುದು ಎಂಬುದರ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow