ನಮ್ಮ ಹೆಣ್ಣುಮಕ್ಕಳು ಯುದ್ಧ ವಿಮಾನಗಳನ್ನು ಹಾರಿಸುತ್ತಿದ್ದಾರೆ: ಪಾಕ್ ಗೆ ಎಚ್ಚರಿಕೆ ಸಂದೇಶ ಕೊಟ್ಟ ಪಿಎಂ ಮೋದಿ

ನವೆಂಬರ್ 1, 2025 - 20:01
 0  34
ನಮ್ಮ ಹೆಣ್ಣುಮಕ್ಕಳು ಯುದ್ಧ ವಿಮಾನಗಳನ್ನು ಹಾರಿಸುತ್ತಿದ್ದಾರೆ: ಪಾಕ್ ಗೆ ಎಚ್ಚರಿಕೆ ಸಂದೇಶ ಕೊಟ್ಟ ಪಿಎಂ ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025 ರಲ್ಲಿ ಭಾಗಿಯಾಗಿದ್ದರು. ಈ ವೇಳೆ ಅಬ್ಬರದ ಭಾಷಣ ಮಾಡಿದ ಮೋದಿ, ಪಾಕಿಸ್ತಾನಕ್ಕೆ ತೀವ್ರ ಸಂದೇಶ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ಭಾರತದ ಮಹಿಳಾ ಶಕ್ತಿಯ ಬಗ್ಗೆ ಹೆಮ್ಮೆಯಿಂದ ಮಾತನಾಡಿದರು.

ಮೋದಿಯವರು ತಮ್ಮ ಭಾಷಣದಲ್ಲಿ ಸ್ಕ್ವಾಡ್ರನ್ ಲೀಡರ್ ಶಿವಾಂಗಿ ಸಿಂಗ್ ಅವರ ಹೆಸರನ್ನು ಉಲ್ಲೇಖಿಸಿ ಹೇಳಿದರು ಎರಡು ದಿನಗಳ ಹಿಂದೆ ನಮ್ಮ ರಾಷ್ಟ್ರಪತಿ ದ್ರೌಪದಿ ಮುರ್ಮು ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು. ಅವರ ಜೊತೆ ಸ್ಕ್ವಾಡ್ರನ್ ಲೀಡರ್ ಶಿವಾಂಗಿ ಸಿಂಗ್ ಇದ್ದರು. ಇಂದು ನಮ್ಮ ಹೆಣ್ಣುಮಕ್ಕಳು ಯುದ್ಧ ವಿಮಾನಗಳನ್ನು ಹಾರಿಸುತ್ತಿದ್ದಾರೆ. ಡ್ರೋನ್ ದೀದಿಗಳಾಗುವ ಮೂಲಕ ಆಧುನಿಕ ಕೃಷಿಯನ್ನು ಉತ್ತೇಜಿಸುತ್ತಿದ್ದಾರೆ. ಭಾರತವು ಈಗ ವಿಶ್ವದಲ್ಲೇ ಅತಿ ಹೆಚ್ಚು ಮಹಿಳಾ STEM ಪದವೀಧರರನ್ನು ಹೊಂದಿದೆ ಎಂಬುದನ್ನು ನಾವು ಹೆಮ್ಮೆಯಿಂದ ಹೇಳಬಹುದು,” ಎಂದು ಹೇಳಿದರು.

ಪ್ರಧಾನಿ ಮೋದಿ ಮಹಿಳೆಯರು ವಿಜ್ಞಾನ, ತಂತ್ರಜ್ಞಾನ, ಸಂಶೋಧನೆ ಹಾಗೂ ನಾಯಕತ್ವದ ಕ್ಷೇತ್ರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವುದನ್ನು ವಿಶಿಷ್ಟವಾಗಿ ಪ್ರಸ್ತಾಪಿಸಿದರು. ಈ ಸಂದರ್ಭದಲ್ಲಿ, ಮಹರ್ಷಿ ದಯಾನಂದ ಸರಸ್ವತಿ ಅವರ 200ನೇ ಜನ್ಮದಿನ ಹಾಗೂ ಆರ್ಯ ಸಮಾಜದ ಸಮಾಜ ಸೇವೆಯ 150ನೇ ವರ್ಷಾಚರಣೆಯ ಅಂಗವಾಗಿ ಸ್ಮರಣಾರ್ಥ ನಾಣ್ಯಗಳನ್ನು ಬಿಡುಗಡೆ ಮಾಡಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow