'ನವಗ್ರಹ' ಸಿನಿಮಾ ಶೆಟ್ಟಿ ಖ್ಯಾತಿಯ ನಟ ಗಿರಿ ದಿನೇಶ್ ನಿಧನ

ಫೆಬ್ರವರಿ 8, 2025 - 09:07
 0  30
'ನವಗ್ರಹ' ಸಿನಿಮಾ ಶೆಟ್ಟಿ ಖ್ಯಾತಿಯ ನಟ ಗಿರಿ ದಿನೇಶ್ ನಿಧನ

ನವಗ್ರಹ ಸಿನಿಮಾ ಸೇರಿ ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ಗಿರಿ ದಿನೇಶ್‌ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗಿರಿ ದಿನೇಶ್ ಅವರಿಗೆ 45 ವರ್ಷ ಆಗಿತ್ತು. ನಿನ್ನೆ ಸಂಜೆ ಪೂಜೆ ಮಾಡುವ ವೇಳೆ ದಿಢೀರ್ ಹೃದಯಾಘಾತ ಆಗಿದೆ.

ಹೃದಯಾಘಾತ ಆಗುತ್ತಿದ್ದಂತೆ ಮನೆಯಲ್ಲೇ ಗಿರಿ ಅವರು ಕುಸಿದು ಬಿದ್ದಿದ್ದರು. ಈ ಕೂಡಲೇ ಇವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲು ಮುಂದಾಗಿದ್ದು, ಆದ್ರೆ ಮಾರ್ಗ ಮಧ್ಯ ಸಾವನ್ನಪ್ಪಿದ್ದಾರೆ.ಗಿರಿ ದಿನೇಶ್ ನವಗ್ರಹ ಸಿನಿಮಾದಿಂದಲೇ ಭಾರೀ ಖ್ಯಾತಿಯನ್ನು ಗಳಿಸಿದ್ದರು.

ಇನ್ನು, ಗಿರಿ ಅವರಿಗೆ ವಿವಾಹ ಆಗಿರಲಿಲ್ಲ. ಚಮಕಾಯ್ಸಿ ಚಿಂದಿ ಉಡಾಯ್ಸಿ, ವಜ್ರ ಸಿನಿಮಾದಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದರು. ನವಗ್ರಹ ಸಿನಿಮಾದಲ್ಲಿ ಶೆಟ್ಟಿ ಪಾತ್ರ ನಿಭಾಯಿಸಿದ್ದರು. ಇವರು ನಟ ದರ್ಶನ್ ಅವರಿಗೆ ಬಹಳ ಆಪ್ತರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow