ನವಜಾತ ಶಿಶುವನ್ನು ಶೌಚಾಲಯದ ಗುಂಡಿಗೆ ಹಾಕಿ ಫ್ಲಶ್ ಮಾಡಿದ ಕಿರಾತಕರು.!

ರಾಮನಗರ: ಆಗ ತಾನೆ ಜನಿಸಿರೋ ಮಗುವನ್ನ ಟಾಯ್ಲೆಟ್ ಕಮೋಡ್ ನಲ್ಲಿ ಹಾಕಿರುವ ಅಮಾನವೀಯ ಘಟನೆ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ನಡೆದಿದೆ. ಹೌದು ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಆಸ್ಪತ್ರೆಯೊಂದರಲ್ಲಿ ಆಗತಾನೆ ಜನಿಸಿರುವ ಶಿಶುವೊಂದನ್ನು ಶೌಚಾಲಯದ ಗುಂಡಿಗೆ ಹಾಕಿ ಫ್ಲಶ್ ಮಾಡಲಾಗಿದೆ. ಬಳಿಕ ಶೌಚಾಲಯದಲ್ಲಿ ನೀರು ಹೋಗದೇ ಕಟ್ಟಿಕೊಂಡ ಹಿನ್ನೆಲೆ ಹೌಸ್ ಕೀಪಿಂಗ್ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಶೌಚಗುಂಡಿಯಲ್ಲಿ ಮಗು ಶವ ಪತ್ತೆಯಾಗಿದೆ. ಮಗು ಜನನವನ್ನ ಮರೆಮಾಚಲು ಯಾರೋ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಈ ಸಂಬಂಧ ಆಸ್ಪತ್ರೆ ವೈದ್ಯರು ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆಗೆ ಮುಂದಾಗಿದ್ದು, ಮಗುವಿನ ಡಿಎನ್‌ಎ ವರದಿ ಆಧರಿಸಿ ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






