ನಾಚಿಕೆಗೇಡಿನ ಕೃತ್ಯ! ಹಾಡಹಗಲೇ ರಸ್ತೆಯಲ್ಲಿ ಬಾಲಕಿಗೆ ವೃದ್ಧನಿಂದ ಲೈಂಗಿಕ ಕಿರುಕುಳ!

ಅಕ್ಟೋಬರ್ 27, 2025 - 21:05
 0  21
ನಾಚಿಕೆಗೇಡಿನ ಕೃತ್ಯ! ಹಾಡಹಗಲೇ ರಸ್ತೆಯಲ್ಲಿ ಬಾಲಕಿಗೆ ವೃದ್ಧನಿಂದ ಲೈಂಗಿಕ ಕಿರುಕುಳ!

ಗುಜರಾತ್: ದೇಶದಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇತ್ತೀಚೆಗೆ ಗುಜರಾತ್‌ನ ಜಾಮ್ನಗರದಲ್ಲಿ ವೃದ್ಧನೊಬ್ಬ ಬಾಲಕಿಗೆ ಹಾಡಹಗಲೇ ಲೈಂಗಿಕ ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶವನ್ನು ಹುಟ್ಟುಹಾಕಿದೆ.

ಈ ಘಟನೆ ಸೆಪ್ಟೆಂಬರ್ 23ರ ಗುರುವಾರ ಸಂಜೆ 4.30ರ ಸುಮಾರಿಗೆ ಜಾಮ್ನಗರದ ಅಪ್ನಾ ಬಜಾರ್ ಪ್ರದೇಶದ ಬಳಿ ನಡೆದಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ರಸ್ತೆಯ ಬದಿಯಲ್ಲಿ ಆಟವಾಡುತ್ತಿದ್ದ ಕೆಲ ಮಕ್ಕಳಲ್ಲಿ ವೃದ್ಧನೊಬ್ಬ ಬಾಲಕಿಯೊಬ್ಬಳನ್ನು ಕರೆದು, ಮೊದಲು ಆಕೆಗೆ ಮುತ್ತು ಕೊಟ್ಟಿದ್ದಾನೆ. ಬಳಿಕ ಆಕೆಯನ್ನು ತೊಡೆಯ ಮೇಲೆ ಕೂರಿಸಿಕೊಂಡು ಅಸಭ್ಯವಾಗಿ ವರ್ತಿಸಿದ್ದಾನೆ.

ಇಡೀ ಘಟನೆ ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದೃಶ್ಯಾವಳಿಯಲ್ಲಿ ಆ ವ್ಯಕ್ತಿಯ ಅಸಭ್ಯ ವರ್ತನೆ ಸ್ಪಷ್ಟವಾಗಿ ಕಾಣುತ್ತದೆ. ಸ್ಥಳದಲ್ಲಿದ್ದ ಮತ್ತೊಂದು ಮಗು ಈ ಅಶ್ಲೀಲ ಕೃತ್ಯವನ್ನು ಗಮನಿಸಿ, ಬಾಲಕಿಯನ್ನು ದೂರ ಎಳೆಯಲು ಪ್ರಯತ್ನಿಸಿದ್ದು, ನಂತರ ಯುವಕನೊಬ್ಬ ಮಧ್ಯಪ್ರವೇಶಿಸಿ ಆಕೆಯನ್ನು ರಕ್ಷಿಸಿದ್ದಾನೆ.

ಘಟನೆಯ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ  ಹರಡುತ್ತಿದ್ದಂತೆಯೇ, ನಾಗರಿಕರು ಪೊಲೀಸ್ ಇಲಾಖೆಯ ಕ್ರಮವನ್ನು ಪ್ರಶ್ನಿಸುತ್ತಿದ್ದಾರೆ. ಹಲವರು ಆ ವ್ಯಕ್ತಿಯನ್ನು ತಕ್ಷಣ ಬಂಧಿಸಿ, ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ್ದಾರೆ. ಜಾಮ್ನಗರ ಪೊಲೀಸರು ಪ್ರಕರಣದ ಕುರಿತು ತನಿಖೆ ಆರಂಭಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆರೋಪಿ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ. 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow