ನಾಲಿಗೆ ಹರಿಬಿಟ್ಟಿರುವ ಕಮಲ್ ಹಾಸನ್ ವಿರುದ್ಧ ಭುಗಿಲೆದ್ದ ಆಕ್ರೋಶ: ‘ಥಗ್ ಲೈಫ್’ ರಾಜ್ಯದಲ್ಲಿ ರಿಲೀಸ್ ಆಗುತ್ತಾ?

ಸಾವಿರಾರು ವರ್ಷಗಳ ಭವ್ಯ ಇತಿಹಾಸ, ಸ್ವತಂತ್ರ್ಯ ಲಿಪಿ, ಶಾಸ್ತ್ರೀಯ ಸ್ಥಾನಮಾನ ಹೊಂದಿರುವ ಶ್ರೀಮಂತ ಭಾಷೆ ಕನ್ನಡ. ಕೋಟ್ಯಾಂತರ ಕರುನಾಡಿಗರ ಜೀವನಾಡಿಯಾಗಿರುವ ಹೆಮ್ಮೆಯ ಕನ್ನಡ ಭಾಷೆಗೆ ನಟ ಕಮಲ್ ಹಾಸನ್ ಅವರು ಅವಮಾನಿಸಿದ್ದಾರೆ. ಕಮಲ್ ಹಾಸನ್ ಅವರ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಡುವುದಕ್ಕೂ ಮುನ್ನ ಹಿಂದಿ ಭಾಷಿಗರನ್ನ ಕೆಣಕಿದ್ರು. ಹಿಂದಿ ಕಲಿಯುವುದಕ್ಕೂ ಮುನ್ನ ಬೇರೆ ಲ್ಯಾಂಗ್ವೇಜ್ ಅನ್ನ ಕಲಿಯಿರಿ ಎಂದಿದ್ರು. ಇದರ ಬೆನ್ನಲ್ಲೇ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದ್ದು ಅಂತ ನಾಲಿಗೆ ಹರಿಬಿಟ್ಟಿದ್ದಾರೆ. ಇದು ಕನ್ನಡಿಗರ ನಿದ್ದೆ ಕೆಡಿಸಿದೆ.. ಇದರಿಂದಾಗಿ ರಾಜ್ಯದಲ್ಲಿ ಕಮಲ್ ಹಾಸನ್ ವಿರುದ್ಧ ಪ್ರತಿಭಟನೆಗಳ ಶುರುವಾಗಿವೆ..
ಕನ್ನಡ ಪರ ಸಂಘಟನೆಗಳು ಕಮಲ್ ಹಾಸನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸ್ತಿದೆ. ಜೂನ್ 5ರಂದು ‘ಥಗ್ ಲೈಫ್’ ರಿಲೀಸ್ ಆಗುತ್ತಿದೆ. ಕರ್ನಾಟಕದಲ್ಲೂ ಸಿನಿಮಾನ ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡಲು ಪ್ಲ್ಯಾನ್ ನಡೆದಿದೆ. ಆದರೆ, ಈಗ ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ರಿಲೀಸ್ ಆಗಬಾರದು ಎಂದು ಕನ್ನಡ ಪರ ಹೋರಾಟಗಾರ ಪ್ರವೀಣ್ ಶೆಟ್ಟಿ ಹೇಳಿದ್ದಾರೆ. ಸಿನಿಮಾ ರಿಲೀಸ್ ಹತ್ತಿರವಾದಂತೆ ಆಕ್ರೋಶ ಇನ್ನಷ್ಟು ಬಲಗೊಳ್ಳಲಿದೆ.
ಪ್ರತಿ ಬಾರಿ ರಜನಿಕಾಂತ್ ಸಿನಿಮಾ ರಿಲೀಸ್ ಸಂದರ್ಭದಲ್ಲಿ ಕರ್ನಾಟಕದಲ್ಲಿ ಒಂದಷ್ಟು ಆಕ್ರೋಶ ವ್ಯಕ್ತವಾಗುತ್ತದೆ. ಅದೇ ರೀತಿ ಈಗ ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ ರಿಲೀಸ್ ವೇಳೆಯೂ ವಿವಾದ ಸೃಷ್ಟಿ ಆಗಿದ್ದು, ಕರ್ನಾಟಕದಲ್ಲಿ ಸಿನಿಮಾ ರಿಲೀಸ್ಗೆ ಅಡಚಣೆ ಉಂಟಾಗುವ ಸಾಧ್ಯತೆ ಇದೆ.
ನಿಮ್ಮ ಪ್ರತಿಕ್ರಿಯೆ ಏನು?






