ನಾಲ್ವಡಿಗಿಂತಲೂ ಸಿಎಂ ಕೊಡುಗೆ ಹೆಚ್ಚು ಎಂದ ಯತೀಂದ್ರ: ಮಗನ ಹೇಳಿಕೆ ಸಮರ್ಥಿಸಿಕೊಂಡ ಸಿದ್ದರಾಮಯ್ಯ!

ಜುಲೈ 26, 2025 - 15:56
 0  17
ನಾಲ್ವಡಿಗಿಂತಲೂ ಸಿಎಂ ಕೊಡುಗೆ ಹೆಚ್ಚು ಎಂದ ಯತೀಂದ್ರ: ಮಗನ ಹೇಳಿಕೆ ಸಮರ್ಥಿಸಿಕೊಂಡ ಸಿದ್ದರಾಮಯ್ಯ!

ಹಾಸನ: ಮೈಸೂರಿಗೆ ನಾಲ್ವಡಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ ಎಂಬ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿದೆ. ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ

ಹಾಸನದ ಅರಸೀಕೆರೆಯಲ್ಲಿ ಮಾತಾಡಿದ ಸಿಎಂ ಸಿದ್ದರಾಮಯ್ಯ, ಮೊದಲು ನಾನು ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಇಷ್ಟಪಡೋದಿಲ್ಲ ಎಂದ್ರು. ಬಳಿಕ ನಾವು ಬಿಜೆಪಿ ಪಕ್ಷದವರಿಗಿಂತ ಹೆಚ್ಚು ಕೆಲಸ ಮಾಡಿದ್ದೇವೆ. ಬಿಜೆಪಿ ಪಕ್ಷದವರು ಏನೂ ಮಾಡಿಲ್ಲ,

ನಾವು ಮಾಡಿದ್ದೇವೆ ಎಂದು ಸಿದ್ದರಾಮಯ್ಯ ಅವರು ಮಗನ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ ವಿಚಾರದ ಬಗ್ಗೆಯೂ ಮಾತಾಡಿದ್ದಾರೆ. "ದೆಹಲಿಯಲ್ಲಿ ಹಿಂದುಳಿದ ವರ್ಗಗಳ ಸಮ್ಮೇಳನ ಇತ್ತು, ಅದಕ್ಕೆ ಹಾಜರಾಗಲು ನಾನು ಹೋಗಿದ್ದೆ. ನಾನು ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸದಸ್ಯ ಹಾಗಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ ಎಂದ್ರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow