ನಾಲ್ವರು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು ವರ್ಗಾವಣೆ - ಯಾರ್ಯಾರು? ಎಲ್ಲೆಲ್ಲಿಗೆ? - ಇಲ್ಲಿದೆ ಡೀಟೈಲ್ಸ್!

ಬೆಂಗಳೂರು:- ಕರ್ನಾಟಕದ ನಾಲ್ವರು ಸೇರಿದಂತೆ ಒಟ್ಟು ಏಳು ಮಂದಿ ಹೈಕೋರ್ಟ್ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಲಾಗಿದೆ.
ಸುಪ್ರೀಂಕೋರ್ಟ್ ಕೊಲಿಜಿಯಂನಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಹಿನ್ನಲೆ ತೆಲಂಗಾಣ, ಆಂಧ್ರಪ್ರದೇಶ ಬೇರೆ ಬೇರೆ ರಾಜ್ಯದ ಒಟ್ಟು ಏಳು ಹೈಕೋರ್ಟ್ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಲಾಗಿದೆ. ನ್ಯಾಯದ ಆಡಳಿತದ ಗುಣಮಟ್ಟವನ್ನು ಬಲಪಡಿಸುವ ಉದ್ದೇಶಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ವರದಿಯಾಗಿದೆ.
ಯಾರೆಲ್ಲಾ ವರ್ಗಾವಣೆ ಮತ್ತು ಎಲ್ಲಿಗೆ?
ನ್ಯಾ. ಹೇಮಂತ್ ಚಂದನ ಗೌಡರ್: ಕರ್ನಾಟಕ ಹೈಕೋರ್ಟ್‌ನಿಂದ ಮದ್ರಾಸ್ ಹೈಕೋರ್ಟ್‌ಗೆ ವರ್ಗಾವಣೆ
ನ್ಯಾ.ಕೃಷ್ಣನ್ ನಟರಾಜನ: ಕರ್ನಾಟಕ ಹೈಕೋರ್ಟ್‌ನಿಂದ ಕೇರಳ ಹೈಕೋರ್ಟ್‌ಗೆ ವರ್ಗಾವಣೆ
ನ್ಯಾ. ಎನ್. ಶ್ರೀನಿವಾಸ ಸಂಜಯ್ ಗೌಡ: ಕರ್ನಾಟಕ ಹೈಕೋರ್ಟ್‌ನಿಂದ ಗುಜರಾತ್ ಹೈಕೋರ್ಟ್‌ಗೆ ವರ್ಗಾವಣೆ
ನ್ಯಾ.ಕೃಷ್ಣ ದೀಕ್ಷಿತ್: ಕರ್ನಾಟಕ ಹೈಕೋರ್ಟ್‌ನಿಂದ ಒಡಿಶಾ ಹೈಕೋರ್ಟ್‌ಗೆ ವರ್ಗಾವಣೆ
ನ್ಯಾ.ಪೆರುಗು ಶ್ರೀಸುಧ: ತೆಲಂಗಾಣ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ
ನ್ಯಾ.ಕೆ.ಸುರೇಂದರ್: ತೆಲಂಗಾಣ ಹೈಕೋರ್ಟ್‌ನಿಂದ ಮದ್ರಾಸ್ ಹೈಕೋರ್ಟ್‌ಗೆ ವರ್ಗಾವಣೆ
ನ್ಯಾ.ಡಾ.ಕೆ.ಮನ್ಮಧ ರಾವ್: ಆಂಧ್ರಪ್ರದೇಶ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ
ನಿಮ್ಮ ಪ್ರತಿಕ್ರಿಯೆ ಏನು?






