ನಾಳೆಯಿಂದ ರಾಜ್ಯದಲ್ಲಿ ಮಾನ್ಸುನ್ ಮಳೆಯ ಅಬ್ಬರ: ಈ ಜಿಲ್ಲೆಗಳಿಗೆ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿಯೂ ಅಬ್ಬರಿಸಿದ್ದ ಮಳೆ ಈ ವಾರ ತುಸು ಬಿಡುವು ನೀಡಿತ್ತು. ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಕೆಲ ಭಾಗಗಳಲ್ಲಿ ಮಳೆ ಪ್ರಮಾಣ ಸಾಮನ್ಯವಾಗಿದ್ದು, ರಾಜ್ಯಾದ್ಯಂತ ಈ ವಾರ ಕಾಲ ಮೋಡ ಕವಿದ ವಾತಾವರಣ ಇರಲಿ. ಆದರೆ, ಮಳೆಯ ಪ್ರಮಾಣ ಕಡಿಮೆಯಾಗಿತ್ತು,
ಇದೀಗ ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಗಣನೀಯವಾಗಿ ಮಳೆ ಪ್ರಮಾಣ ತಗ್ಗಿದ್ದು, ಜೂನ್ 10 ರಿಂದ ಮತ್ತೆ ಮಳೆ ಹೆಚ್ಚಾಗಲಿದೆ. ಜೂ. 7 ರಿಂದ 9ರವರೆಗೆ ರಾಜ್ಯಾದ್ಯಂತ ಅತಿ ಸಾಧಾರಣ ಮಳೆಯಾಗಲಿದ್ದು. ಜೂನ್ 10 ರಿಂದ 12 ರವರೆಗೆ ತುಸು ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕರ್ನಾಟಕದ 11 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಿದ್ದು, ಜೂನ್ 8 ರಂದು ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಡ್ಯಾಂಗಳು ಕೂಡ ಬಹುತೇಕ ಭರ್ತಿಯಾಗಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದಿರಲು ಸೂಚಿಸಿದೆ. ಹೌದು.. ಕರ್ನಾಟಕದಲ್ಲಿ ಅವಧಿಗೂ ಮುನ್ನವೇ ಮುಂಗಾರು ಮಳೆ ಪ್ರವೇಶ ಪಡೆದಿದ್ದು, ಮೇ ತಿಂಗಳಲ್ಲಿ ದಾಖಲೆ ಮಳೆ ಸುರಿದಿದೆ.
ಅನಂತರ ಜೂನ್ ಮೊದಲ ವಾರದಲ್ಲಿ ಕೊಂಚ ಬಿಡುವು ಕೊಟ್ಟಿದ್ದ ಮಳೆರಾಯ ಮತ್ತೆ ಈಗ ಆರ್ಭಟಿಸುವ ಮುನ್ಸೂಚನೆ ಸಿಕ್ಕಿದೆ. ಮಳೆ ಆರ್ಭಟ ತಗ್ಗಿದ್ದರಿಂದ ರೈತರು ಬಿತ್ತನೆ ಕಾರ್ಯ ಆರಂಭಿಸಿದ್ದರು, ಈಗ ಮತ್ತೆ ಮಳೆರಾಯನ ಮುನ್ಸೂಚನೆ ಸಿಕ್ಕಿದ್ದು, ಕೃಷಿ ಚಟುವಟಿಕೆಗೆ ಅಡ್ಡಿಯಾಗುವ ಆತಂಕ ಶುರುವಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






