ನಿಗೂಢ ಸ್ಫೋಟ: ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ CM ಸಿದ್ದರಾಮಯ್ಯ
ಬೆಂಗಳೂರು: ನಗರದ ಆಡುಗೊಡಿಯಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಪ್ರಾಣ ಕಳೆದುಕೊಂಡ 8 ವರ್ಷದ ಮುಬಾರಕ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ₹5 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಇಂದು ಅವರು ಸ್ಫೋಟ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಮತ್ತು ಮಾಧ್ಯಮಗಳಿಗೆ ಘಟನೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದರು.
ಸ್ಫೋಟ ಕಸ್ತೂರಮ್ಮ ಎಂಬುವರ ಮನೆಯಲ್ಲಿ ಸಂಭವಿಸಿದ್ದು, ಮನೆ ವರಾಂಡಾಕಾರವಾಗಿರುವುದರಿಂದ ಅಕ್ಕಪಕ್ಕದ ಹಲವಾರು ಮನೆಗಳಿಗೆ ಹಾನಿಯಾಗಿದೆ. ಈ ಸ್ಫೋಟದಲ್ಲಿ 9 ಮಂದಿ ಗಾಯಗೊಂಡಿದ್ದು, ಕಸ್ತೂರಮ್ಮ ಅವರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ. ಅವರ ಚಿಕಿತ್ಸೆ ಹಾಗೂ ಇತರ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸುವುದಾಗಿ ಮುಖ್ಯಮಂತ್ರಿ ಹೇಳಿದರು.
"ಮೇಲನೋಟಕ್ಕೆ ಸಿಲಿಂಡರ್ ಸ್ಫೋಟವೇ ಈ ದುರ್ಘಟನೆಗೆ ಕಾರಣ ಎಂದು ತೋರುತ್ತದೆ. ಹಾನಿಯಾದ ಮನೆಗಳ ರಿಪೇರಿಗೆ ಕೂಡ ಸೂಚನೆ ನೀಡಲಾಗಿದೆ. ಪಕ್ಕದ ಮನೆಗಳಿಗೆಂಟು ಹಾನಿಯಿರುವುದನ್ನು ಕೂಡ ಪರಿಶೀಲಿಸಲಾಗುತ್ತದೆಎಂದು ಸಿಎಂ ಹೇಳಿದರು.
ನಿಮ್ಮ ಪ್ರತಿಕ್ರಿಯೆ ಏನು?