ನಿರುದ್ಯೋಗಿಗಳ ಗಮನಕ್ಕೆ: ಮೇ 22ರಂದು ಗವಿಮಠ ಕ್ಯಾಂಪಸ್‌ನಲ್ಲಿ ಬೃಹತ್ ಉದ್ಯೋಗ ಮೇಳ.. ಆಸಕ್ತರು ಪಾಲ್ಗೊಳ್ಳಿ!

ಮೇ 21, 2025 - 08:04
 0  9
ನಿರುದ್ಯೋಗಿಗಳ ಗಮನಕ್ಕೆ: ಮೇ 22ರಂದು ಗವಿಮಠ ಕ್ಯಾಂಪಸ್‌ನಲ್ಲಿ  ಬೃಹತ್ ಉದ್ಯೋಗ ಮೇಳ.. ಆಸಕ್ತರು ಪಾಲ್ಗೊಳ್ಳಿ!

ನಿಮ್ಮ ಎಜುಕೇಶನ್ ಗೆ ತಕ್ಕ ಉದ್ಯೋಗ ಸರ್ಚ್ ಮಾಡುತ್ತಿದ್ದೀರಾ? ಹಾಗಿದ್ರೆ ನಿಮಗಿಲ್ಲಿದೆ ಗುಡ್ ನ್ಯೂಸ್..ಕೊಪ್ಪಳ ಜಿಲ್ಲೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿ ಇದೆ. ಕೊಪ್ಪಳದಲ್ಲಿ ಮೇ 22ರಂದು ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ನಿಗದಿತ ದಾಖಲಾತಿಗಳ ಜೊತೆ ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು.

 ಗವಿಮಠ ಕ್ಯಾಂಪಸ್‌ನಲ್ಲಿ ಮೇ 22ರ ಗುರುವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಉದ್ಯೋಗ ಮೇಳ ನಡೆಯಲಿದೆ. ಈ ಬೃಹತ್ ಉದ್ಯೋಗ ಮೇಳದಲ್ಲಿ ಕೊಪ್ಪಳ, ಹುಬ್ಬಳ್ಳಿ, ಬೆಂಗಳೂರು, ಬೆಳಗಾವಿ, ಬಳ್ಳಾರಿ, ಹಾಸನ, ಶಿವಮೊಗ್ಗ ಹಾಗೂ ಇತರ ಜಿಲ್ಲೆಗಳ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, ತಮ್ಮಲ್ಲಿನ ಖಾಲಿ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಉದ್ಯೋಗ ಮೇಳದಲ್ಲಿ 18 ರಿಂ 35 ವರ್ಷದ ಆಸಕ್ತ ನಿರುದ್ಯೋಗ ಪುರುಷ, ಮಹಿಳಾ ಹಾಗೂ ವಿಕಲಚೇತನ ಅಭ್ಯರ್ಥಿಗಳು ಭಾಗವಹಿಸಬಹುದು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವನ್ನು ಸಂಪರ್ಕಿಸಿ, ದೂರವಾಣಿ ಸಂಖ್ಯೆ 9353515518.

ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ತತ್ಸಮಾನ, ಐಟಿಐ, ಡಿಪ್ಲೋಮಾ, ಕಂಪ್ಯೂಟರ್ ತರಬೇತಿ ಹಾಗೂ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು, ತಮ್ಮ ವಿದ್ಯಾರ್ಹತೆಯ ಎಲ್ಲಾ ಪ್ರಮಾಣ ಪತ್ರಗಳ 10 ಪ್ರತಿ ಮತ್ತು ಆಧಾರ್‌ ಕಾರ್ಡ್‌ ಪ್ರತಿ, ರೆಸ್ಯೂಮ್‌ ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಭಾಗವಹಿಸಬಹುದು

ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಬಳ್ಳಾರಿಯ ಸಮರ್ಥನಂ ಅಂಗವಿಕಲರ ಸಂಸ್ಥೆ ಹಾಗೂ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಕಾಲೇಜ್ ಆಫ್ ಎಜ್ಯುಕೇಶನ್ ಇವರ ಸಂಯುಕ್ತಾಶ್ರಯದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow