ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಪ್ರತಿಷ್ಟಿತ ಕಂಪನಿಯಲ್ಲಿದೆ ಹಲವು ಉದ್ಯೋಗ; ಪದವಿ ಆದವರು ಅರ್ಜಿ ಸಲ್ಲಿಸಿ!

ಸೆಪ್ಟೆಂಬರ್ 25, 2024 - 08:20
 0  15
ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಪ್ರತಿಷ್ಟಿತ ಕಂಪನಿಯಲ್ಲಿದೆ ಹಲವು ಉದ್ಯೋಗ; ಪದವಿ ಆದವರು ಅರ್ಜಿ ಸಲ್ಲಿಸಿ!

ತನ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 

ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದ್ದು, ಪದವಿ ಪೂರೈಸಿದ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಪ್ರೆಂಟಿಸ್ ಹುದ್ದೆಗಳ ಆರಂಭಿಕ ಮಾಸಿಕ ವೇತನ 9 ಸಾವಿರ ರೂಪಾಯಿ ಇರಲಿದೆ ಎಂದು ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗಿದೆ.

ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು. ಗರಿಷ್ಠ ವಯಸ್ಸು 16-09-2024 ರಂತೆ 30 ವರ್ಷ ನಿಗದಿ ಪಡಿಸಲಾಗಿದೆ. ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ಮೂಲಕದ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.

ಅರ್ಜಿ ಸಲ್ಲಿಕೆ ದಿನಾಂಕ    ಸೆಪ್ಟೆಂಬರ್ 21, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ    ಅಕ್ಟೋಬರ್ 5, 2024

ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಕ್ಟೋಬರ್ 5, 2024 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ , ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ. ಇನ್ನು ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 800 ರೂಪಾಯಿ, ಎಸ್‌ಸಿ, ಎಸ್‌ಟಿ ಹಾಗು ಮಹಿಳಾ ಅಭ್ಯರ್ಥಿಗಳಿಗೆ 600 ರೂಪಾಯಿ , PWD ಅಭ್ಯರ್ಥಿಗಳಿಗೆ 400 ರೂಪಾಯಿ ಅರ್ಜಿ ಶುಲ್ಕ ನಿಗದಿ ಪಡಿಸಲಾಗಿದೆ.

ಕಂಪೆನಿ    :- ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್
ಒಟ್ಟು ಹುದ್ದೆಗಳು:-    325
ವಿದ್ಯಾರ್ಹತೆ:-     ಪದವಿ
ಹುದ್ದೆಯ ಹೆಸರು:- ಅಪ್ರೆಂಟಿಸ್

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow