ನಿರುದ್ಯೋಗಿಗಳೇ ಗಮನಿಸಿ: ಇಂದು ಬೆಂಗಳೂರಲ್ಲಿ ಬೃಹತ್‌ ಉದ್ಯೋಗ ಮೇಳ, ತಪ್ಪದೇ ಪಾಲ್ಗೊಳ್ಳಿ!

ಅಕ್ಟೋಬರ್ 20, 2024 - 09:06
 0  18
ನಿರುದ್ಯೋಗಿಗಳೇ ಗಮನಿಸಿ: ಇಂದು ಬೆಂಗಳೂರಲ್ಲಿ ಬೃಹತ್‌ ಉದ್ಯೋಗ ಮೇಳ, ತಪ್ಪದೇ ಪಾಲ್ಗೊಳ್ಳಿ!

ಬೆಂಗಳೂರು:- ನಿರುದ್ಯೋಗಿಗಳು ತಪ್ಪದೇ ಓದಲೇಬೇಕಾದ ಸ್ಟೋರಿ ಇದು. ನಿಮ್ಮ ವಿದ್ಯೆಗೆ ಅನುಗುಣವಾಗಿ ಕೆಲಸ ಹುಡುಕುತ್ತಿದ್ರೆ ಇಂದು ಬೆಂಗಳೂರಿನಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಿ.   ಉದ್ಯೋಗ ಮೇಳದಲ್ಲಿ ಹಲವು ವಿಶೇಷತೆಗಳು ಇವೆ. ನೂರಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ. ನಿರುದ್ಯೋಗಿಗಳಿಗೆ ಇದು ಸುವರ್ಣ ಅವಕಾಶ ಎಂದೇ ಹೇಳಲಾಗುತ್ತಿದೆ.

ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ರಾಜ್ಯ ಸರ್ಕಾರದ ವಿವಿಧ ಸಂಸ್ಥೆಗಳು ಭರ್ಜರಿ ಗುಡ್ನ್ಯೂಸ್ಕೊಟ್ಟಿವೆ. ನಾಳೆ ಬೃಹತ್ಉದ್ಯೋಗ ಮೇಳವನ್ನು ಆಯೋಜಿಸಿದೆ. ಉದ್ಯೋಗ ಮೇಳದಲ್ಲಿ 100ಕ್ಕಿಂತಲೂ ಹೆಚ್ಚಿನ ಪ್ರತಿಷ್ಠಿತ ಬೃಹತ್, ಮಾಧ್ಯಮ ಹಾಗೂ ಸಣ್ಣ ಉದ್ಯೋಗದಾತ ಸಂಸ್ಥೆಗಳು ಭಾಗವಹಿಸಲಿವೆ. ಸಂಸ್ಥೆಗಳಲ್ಲಿ ಖಾಲಿ ಉಳಿದಿರುವ ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಲಾಗಿದೆ.

ಎಲ್ಲಿ ಉದ್ಯೋಗ ಮೇಳ: ಬೆಂಗಳೂರು ನಗರ ಜಿಲ್ಲೆಯ ಕೆ.ಎಲ್. ಸಂಸ್ಥೆಯ ಎಸ್. ನಿಜಲಿಂಗಪ್ಪ ಮಹಾವಿದ್ಯಾಲಯದಲ್ಲಿ (ನಂ.1040, 28ನೇ ಕ್ರಾಸ್ ರಸ್ತೆ, 2ನೇ ಬ್ಲಾಕ್, ರಾಜಾಜಿನಗರ ಬೆಂಗಳೂರು - 560010) ಬೃಹತ್ಉದ್ಯೋಗಮೇಳವನ್ನು ಆಯೋಜಿಸಲಾಗಿದೆ. ವಾರಾಂತ್ಯವಾಗಿರುವುದರಿಂದ ಸಾವಿರಾರು ಜನ ಉದ್ಯೋಗಾಕಾಂಕ್ಷಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಯಾರೆಲ್ಲ ಇದಕ್ಕೆ ಅರ್ಹರು: ಅಕ್ಟೋಬರ್‌ 20ರಂದು ಬೆಂಗಳೂರಿನ ಕೆ.ಎಲ್. ಸಂಸ್ಥೆಯ ಎಸ್. ನಿಜಲಿಂಗಪ್ಪ ಮಹಾವಿದ್ಯಾಲಯದಲ್ಲಿ ನಡೆಯಲಿರುವ ಬೃಹತ್ಉದ್ಯೋಗ ಮೇಳದಲ್ಲಿ ವಿವಿಧ ವಿದ್ಯಾಹರ್ತೆ ಇರುವವರು ಭಾಗವಹಿಸಬಹುದಾಗಿದೆ. ಅದರಲ್ಲಿ ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್‌, ಪದವಿ, ಸ್ನಾತಕೋತರ ಪದವಿ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಉದ್ಯೋಗ ಮೇಳಕ್ಕೆ ಅರ್ಜಿ ಸಲ್ಲಿಸುವುದು ಹೇಗೆ: ಉದ್ಯೋಗ ಮೇಳಕ್ಕೆ ಅತ್ಯಂತ ಸರಳವಾಗಿ ಅರ್ಜಿ ಸಲ್ಲಿಸಬಹುದಾಗಿದೆ. https://jobfair.calicut.nielit.in/ ಲಿಂಕ್ಗೆ ಭೇಟಿ ನೀಡುವ ಮೂಲಕ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ವಿವರಗಳನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಅಭ್ಯರ್ಥಿಗಳ ಬಯೋಡಾಟ ಹಾಗೂ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳ ಜೆರಾಕ್ಸ್ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬೇಕು ಎಂದು ಬೆಂಗಳೂರಿನ ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕ ತಿಳಿಸಿದ್ದಾರೆ.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow