ನಿಲ್ಲದ ಕಾಮುಕರ ಅಟ್ಟಹಾಸ: ಯುವತಿಯನ್ನು ಆಟೋದಲ್ಲಿ ಕಿಡ್ನ್ಯಾಪ್ ಮಾಡಿ ಲೈಂಗಿಕ ದೌರ್ಜನ್ಯ

ಫೆಬ್ರವರಿ 5, 2025 - 22:09
 0  16
ನಿಲ್ಲದ ಕಾಮುಕರ ಅಟ್ಟಹಾಸ: ಯುವತಿಯನ್ನು ಆಟೋದಲ್ಲಿ ಕಿಡ್ನ್ಯಾಪ್ ಮಾಡಿ ಲೈಂಗಿಕ ದೌರ್ಜನ್ಯ

ಅಪರಾಧ ಪ್ರಕರಣಗಳಲ್ಲಿ ಭಾರಿ ಹೆಚ್ಚಳ ಕಂಡುಬಂದಿದ್ದು, ಆತಂಕ ಸೃಷ್ಟಿಯಾಗಿದೆ. ಹಾಗೆಯೇ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳೂ ಹೆಚ್ಚಾಗಿದ್ದುಕಾಮುಕರ ಅಟ್ಟಹಾಸ ನಿಲ್ಲದಂತಾಗಿದೆ. ಇದೀಗ ಚೆನ್ನೈನ ಕಿಲಂಬಕ್ಕಂ ಟರ್ಮಿನಸ್ ಬಳಿ ಯುವತಿಯನ್ನು ಆಟೋದಲ್ಲಿ ಕರೆದೊಯ್ದು ಮೂವರು ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ನಡೆದಿದೆ. ಅಸ್ಸಾಂ ಮೂಲದ ಯುವತಿ ಬಸ್ಸಿಗಾಗಿ ಕಾಯುತ್ತಿದ್ದಾಗ ಆಟೋದಲ್ಲಿ ಬಂದ ಮೂವರು ಆಕೆಯನ್ನು ಅಪಹರಿಸಿದ್ದರು. ಆಟೋ ಚಾಲಕ ಸೇರಿ ಮೂವರು ಚಾಕು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಲಾಗಿದೆ.

ತಾಂಬರಂ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಲು ಅಲ್ಲೇ ಸುತ್ತಮುತ್ತಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಎರಡು ವಿಶೇಷ ತಂಡಗಳನ್ನು ಕೂಡ ರಚಿಸಲಾಗಿದೆ. ಮೂವರು ಬೇರೊಂದು ಆಟೋದಲ್ಲಿ ಕುಳಿತುಕೊಳ್ಳುವಂತೆ ಹೇಳಿ ಕೊಯಂಬೇಡುವಿನಲ್ಲಿ ಬಿಡಲು ಹೇಳಿದ ಬಳಿಕ ಆಕೆ ಪೊಲೀಸರನ್ನು ಸಂಪರ್ಕಿಸುವಲ್ಲಿ ಯಶಸ್ವಿಯಾಗಿದ್ದಾಳೆ.

ಆಟೋ ಚಾಲಕ ಚೆನ್ನೈನಲ್ಲಿರುವ ತನ್ನ ಸಂಬಂಧಿಕರಿಗೆ ಮಾಹಿತಿ ನೀಡಲು ಸಹಾಯ ಮಾಡಿದ್ದಾನೆಂದು ಆಕೆ ಹೇಳಿದ್ದಾಳೆ. ಅಪಹರಣಕ್ಕೊಳಗಾಗಿದ್ದಾಗ ಆಟೋದಲ್ಲಿ ಆಕೆಗೆ ಚಿತ್ರಹಿಂಸೆ ನೀಡುತ್ತಿರುವುದನ್ನು ನೋಡಿದ್ದ ಜನರು ಕೂಡಲೇ ಪೊಲೀಸ್ ಕಂಟ್ರೋಲ್ರೂಂಗೆ ಕರೆ ಮಾಡಿದ್ದರು. ಮಧ್ಯರಾತ್ರಿಯ ಸುಮಾರಿಗೆ ಕೊಯೆಂಬೆಡು ಬಳಿ ಪೊಲೀಸರು ಆಕೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾದರು.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow