ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ಗೃಹ ಸಚಿವರು ಹೇಳಿದ್ದೇನು ಗೊತ್ತಾ..?

ಎಪ್ರಿಲ್ 21, 2025 - 16:02
 0  8
ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ಗೃಹ ಸಚಿವರು ಹೇಳಿದ್ದೇನು ಗೊತ್ತಾ..?

ಬೆಂಗಳೂರು:- ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. 

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣದ ಸಮಗ್ರ ತನಿಖೆ ಆಗುವವರೆಗೂ ಯಾವುದನ್ನೂ ಹೇಳಲು ಆಗುವುದಿಲ್ಲ. ನಿವೃತ್ತ ಡಿಜಿಪಿ ಓಂ ಪ್ರಕಾಶ್‌ ಹತ್ಯೆ ಪ್ರಕರಣ ತನಿಖೆ ನಡೆಸಲಾಗುತ್ತಿದೆ. ತನಿಖೆಯಲ್ಲಿ ಏನೆಲ್ಲ ಮಾಹಿತಿ ಸಿಗುತ್ತದೆ ಎಂಬುದನ್ನು ನೋಡಬೇಕಿದೆ. 2025 ರಲ್ಲಿ ನಾನು ಗೃಹ ಸಚಿವನಾಗಿದ್ದ ವೇಳೆ ಓಂ ಪ್ರಕಾಶ್ ಅವರು ಡಿಜಿಪಿಯಾಗಿ ಕೆಲಸ ಮಾಡಿದ್ದರು. ಒಳ್ಳೆಯ ಅಧಿಕಾರಿ, ಒಳ್ಳೆಯ ವ್ಯಕ್ತಿ. ಈ ರೀತಿಯಾಗಬಾರದಿತ್ತು ಎಂದು ವಿಷಾದ ವ್ಯಕ್ತಪಡಿಸಿದರು.

ಪ್ರಕರಣದ ತನಿಖೆಯಾಗುವವರೆಗೂ ಘಟನೆಗೆ ಇದೇ ಕಾರಣ ಎಂದು ಹೇಳಲು ಆಗುವುದಿಲ್ಲ. ನಿರ್ದಿಷ್ಟವಾಗಿ ಹೇಳಲು ಬರುವುದಿಲ್ಲ. ಕೌಟುಂಬಿಕ ಕಾರಣದ ಬಗ್ಗೆ ಹಿಂದೆ ದೂರು ಕೊಟ್ಟಿರುವುದನ್ನು ತನಿಖೆಯಲ್ಲಿ ಪರಿಶೀಲಿಸುತ್ತಾರೆ ಎಂದರು.

ಎಲ್ಲವನ್ನು ಸಮಗ್ರವಾಗಿ ತನಿಖೆ ಮಾಡುವವರೆಗೂ ಯಾವುದನ್ನು ಹೇಳಲು ಆಗುವುದಿಲ್ಲ‌. ಓಂ ಪ್ರಕಾಶ್ ಅವರ ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಪತ್ನಿಗೆ ಕಾಯಿಲೆ ಇತ್ತು ಎಂಬುದನ್ನು ಈಗಲೇ ಹೇಳಲಾಗುವುದಿಲ್ಲ‌ ಎಂದು ಹೇಳಿದರು

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow