ನೀರಲ್ಲಿ ಸೋಡಿಯಂ ಸ್ಪೋಟ: ಪ್ರತಾಪ್ ಬಂಧನ ಬೆನ್ನಲ್ಲೇ ಮತ್ತಿಬ್ಬರಿಗೂ ಸಂಕಟ! FIR ದಾಖಲು!

ತುಮಕೂರು:- ಬಿಗ್ ಬಾಸ್ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಯಾರಿಗ್ ತಾನೇ ಗೊತ್ತಿಲ್ಲ ಹೇಳಿ. ತಮ್ಮ ಚಾಣಾಕ್ಷತನ, ಮುಗ್ಧತೆಯಿಂದಲೇ ಬಿಗ್ ಬಾಸ್ ಸೀಸನ್ 10 ರಲ್ಲಿ ಸದ್ದು ಮಾಡಿದ್ದ ಪ್ರತಾಪ್ ಗೆ ಯಾಕೋ ಸಂಕಷ್ಟ ಎದುರಾಗಿದೆ.
ಎಸ್, ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಿಗ್ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ, ಡ್ರೋನ್ ಪ್ರತಾಪ್ ಮಾತ್ರವಲ್ಲ ಒಟ್ಟು ಮೂವರ ವಿರುದ್ಧ ತುಮಕೂರಿನ ಮಿಡಿಗೇಶಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಕೃಷಿ ಹೊಂಡದಲ್ಲಿ ಬ್ಲಾಸ್ಟ್ ಮಾಡಿ, ಅದರ ವಿಡಿಯೋವನ್ನು ಯೂಟ್ಯೂಬ್ನಲ್ಲಿ ಪ್ರತಾಪ್ ಅಪ್ಲೋಡ್ ಮಾಡಿದ್ದರು. ಆ ವಿಡಿಯೋ ಆಧರಿಸಿ ಸುಮೊಟೊ ಕೇಸ್ ದಾಖಲಾಗಿದೆ. ಬಿಎನ್ಎಸ್ ಕಾಯ್ದೆ ಸೆಕ್ಷನ್ 176 ಮತ್ತು ಸಿಆರ್ಪಿಸಿ 158-ಎ ಮತ್ತು ಬಿ ಹಾಗೂ ಸ್ಫೋಟಕ ವಸ್ತುಗಳ ನಿಯಂತ್ರಣ ಕಾಯ್ದೆಯಡಿ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
ಡ್ರೋನ್ ಪ್ರತಾಪ್ ಸೇರಿ ಕೃಷಿ ಹೊಂಡದ ಮಾಲೀಕನ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ರಾಯರ ಬೃಂದಾವನ ಫಾರಂನ ಮಾಲೀಕ ಜಿತೇಂದ್ರ ಜೈನ್ ಹಾಗೂ ವಿಡಿಯೋ ಚಿತ್ರೀಕರಣ ಮಾಡಿದ ಮತ್ತೋರ್ವ ವ್ಯಕ್ತಿ ಸೇರಿ ಮೂವರ ಮೇಲೆ ಪ್ರಕರಣ ದಾಖಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






