ನೀವು ಸ್ಲಿಮ್ ಆಗ್ಬೇಕಾ!? ಹಾಗಿದ್ರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ರೀತಿ ಅಂಜೂರ ಸೇವನೆ ಮಾಡಿ!

ಆಗಸ್ಟ್ 3, 2025 - 07:01
ಜುಲೈ 27, 2025 - 16:52
 0  19
ನೀವು ಸ್ಲಿಮ್ ಆಗ್ಬೇಕಾ!? ಹಾಗಿದ್ರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ರೀತಿ ಅಂಜೂರ ಸೇವನೆ ಮಾಡಿ!

ನಮ್ಮ ಪ್ರಕೃತಿಯಲ್ಲಿ ಆನೇಕ ರೀತಿಯ ಹಣ್ಣುಗಳು ಇವೆ, ಅವು‌ಗಳಲ್ಲಿ ಕೆಲವು ಹಣ್ಣುಗಳು ತುಂಬಾನೇ ಪೌಷ್ಟಿಕಾಂಶ ಭರಿತವಾದವು. ಈ ರೀತಿಯ ಹಣ್ಣುಗಳು ನಮ್ಮ ಯೋಗಕ್ಷೇಮವನ್ನು ಹೆಚ್ಚಿಸುತ್ತವೆ, ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು ಅಂತ ಅರ್ಥ. ಅವುಗಳಲ್ಲಿ ಅಂಜೂರ ಹಣ್ಣುಗಳು ತುಂಬಾನೇ ಪೌಷ್ಟಿಕಾಂಶಭರಿತವಾದವು ಮತ್ತು ಇದನ್ನು ಅಂಜೀರ್ ಎಂದೂ ಸಹ ಕರೆಯಲ್ಪಡುತ್ತದೆ. 

ಅಂಜೂರವು ಆರೋಗ್ಯಕ್ಕೆ ತುಂಬಾ ಒಳ್ಳೆಯದಾದರೂ ಅವುಗಳನ್ನು ಯಾವ ರೀತಿಯಲ್ಲಿ ಸೇವನೆ ಮಾಡಬೇಕು ಎಂಬುದು ಎಲ್ಲರಿಗೂ ತಿಳಿದಿರುವುದಿಲ್ಲ. ಆದರೆ ಇವುಗಳನ್ನು ಯಾವ ಸಮಯದಲ್ಲಿ ಸೇವನೆ ಮಾಡುತ್ತೇವೆ ಎಂಬುದರ ಮೇಲೆ ಇವುಗಳಿಂದ ಸಿಗುವ ಪ್ರಯೋಜನಗಳು ಅವಲಂಬಿತವಾಗಿರುತ್ತದೆ ಎಂಬುದನ್ನು ನಾವು ಮರೆಯಬಾರದು. ಹಾಗಾದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅಂಜೂರ ಸೇವನೆ ಮಾಡಬಹುದೇ? ಯಾವ ಸಮಯದಲ್ಲಿ ಸೇವನೆ ಮಾಡುವುದರಿಂದ ಯಾವ ರೀತಿಯ ಆರೋಗ್ಯ ಪ್ರಯೋಜನಗಳು ಸಿಗುತ್ತವೆ ಎಂಬುದನ್ನು ತಿಳಿದುಕೊಳ್ಳಿ.

ಊಟದ ನಂತರ ನಿಮ್ಮ ಫೈಬರ್ ಸೇವನೆಯ ಭಾಗವಾಗಿ ನೀವು ಒಂದು ಅಥವಾ ಎರಡು ಅಂಜೂರವನ್ನು ತಿನ್ನಬಹುದು. ಇದು ಶಕ್ತಿಯನ್ನು ಹೆಚ್ಚಿಸುತ್ತದೆ. ಪ್ರತಿದಿನ, ಈ ಅಭ್ಯಾಸವನ್ನು ತಪ್ಪದೆ ರೂಢಿಸಿಕೊಂಡರೆ ಕಿಣ್ವಗಳು ಬಿಡುಗಡೆಯಾಗುತ್ತವೆ ಮತ್ತು ಜೀರ್ಣಕ್ರಿಯೆಯ ಸಮಸ್ಯೆಗಳು ದೂರವಾಗುತ್ತವೆ. ಇದಕ್ಕಿಂತ ಹೆಚ್ಚಿನ ಪ್ರಯೋಜನಗಳು ಬೇಕಾದರೆ, ಎರಡು ಅಥವಾ ಮೂರು ಅಂಜೂರವನ್ನು ಅರ್ಧ ಕಪ್ ನೀರಿನಲ್ಲಿ ರಾತ್ರಿಯಿಡೀ ನೆನೆಸಿಡಿ. ಬೆಳಿಗ್ಗೆ ಎದ್ದು ಏನನ್ನೂ ತಿನ್ನದೆ ಖಾಲಿ ಹೊಟ್ಟೆಯಲ್ಲಿ ಅಂಜೂರ ಸೇವನೆ ಮಾಡಿ. ಇವುಗಳನ್ನು ನಿಯಮಿತವಾಗಿ ಮಾಡಿದರೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳು ಸಿಗುತ್ತದೆ. ಇದು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಮಾತ್ರವಲ್ಲ ನಿಮ್ಮ ತೂಕ ಕೂಡ ಕಡಿಮೆಯಾಗುತ್ತದೆ.

ಅಂಜೂರವನ್ನು ನೆನೆಸಿ ಆ ನೀರನ್ನು ಕುಡಿಯುವುದರಿಂದಲೂ ಕೂಡ ಮಲಬದ್ಧತೆ ಮತ್ತು ಜೀರ್ಣಕಾರಿ ಸಮಸ್ಯೆಗಳು ನಿವಾರಣೆಯಾಗುತ್ತವೆ. ಇದು ಹೊಟ್ಟೆ ನೋವು ಮತ್ತು ಉಬ್ಬರದಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಮಾತ್ರವಲ್ಲ ಅಂಜೂರ ನೆನೆಸಿದ ನೀರನ್ನು ಕುಡಿಯುವುದರಿಂದ ದೇಹದಲ್ಲಿರುವ ವಿಷಕಾರಿ ಅಂಶವನ್ನು ನಿವಾರಿಸಿ ಯಕೃತ್ತಿನ ಕಾರ್ಯವನ್ನು ಸುಧಾರಿಸುತ್ತದೆ. ರಾತ್ರಿ ಸಮಯದಲ್ಲಿ ಎರಡು ಅಂಜೂರವನ್ನು ಬೆಚ್ಚಗಿನ ನೀರಿನಲ್ಲಿ ನೆನೆಸಿ ಕೂಡ ಸೇವಿಸಬಹುದು. ಊಟದ ನಂತರ, ಈ ರೀತಿ ಮಾಡುವುದರಿಂದ ಆಯಾಸ, ಸುಸ್ತು ಎಲ್ಲವೂ ಕಡಿಮೆಯಾಗುತ್ತದೆ. ಮಾತ್ರವಲ್ಲ ಶಕ್ತಿಯನ್ನು ಹೆಚ್ಚಿಸುತ್ತದೆ. ತಜ್ಞರು ದಿನಕ್ಕೆ ಎರಡು ಅಥವಾ ಮೂರು ಅಂಜೂರ ಸೇವನೆ ಮಾಡುವುದು ಒಳ್ಳೆಯದು ಎಂದು ಹೇಳುತ್ತಾರೆ. ಏಕೆಂದರೆ ಇದನ್ನು ಅತಿಯಾಗಿ ತಿನ್ನುವುದು ಕೂಡ ಆರೋಗ್ಯಕ್ಕೆ ಒಳ್ಳೆಯದಲ್ಲ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow